ಬೆಳಗಾವಿ: ಪ್ರೇಮಕವಿ, ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಕೆ. ಕಲ್ಯಾಣ್ ಅವರು ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಬೆಳಗಾವಿಯ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಕೆ. ಕಲ್ಯಾಣ್ ದೂರಿನ ಮೇರೆಗೆ ಸೆಪ್ಟೆಂಬರ್ 30ರಂದು ಎಫ್‍ಐಆರ್ ಕೂಡ ದಾಖಲಾಗಿತ್ತು.
ಇತ್ತ ದೂರು ಸ್ವೀಕರಿಸಿದ ಪೊಲೀಸರು ಕೆ.ಕಲ್ಯಾಣ ಪತ್ನಿ ಅಶ್ವಿನಿ ಕರೆತಂದಿದ್ದಾರೆ. ಅಲ್ಲದೆ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಅಶ್ವಿನಿ ಅವರಿಂದ ಪೊಲೀಸರು ಮಾಹಿತಿಯನ್ನು ಪಡೆಯುತ್ತಿದ್ದಾರೆ.
ಕಲ್ಯಾಣ್ ಪತ್ನಿ ಅಶ್ವಿನಿಯನ್ನು ಅತ್ತೆ, ಮಾವನನ್ನು ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಪತ್ನಿ ಅಶ್ವಿನಿ ಅಕೌಂಟ್‍ನಿಂದ 19 ಲಕ್ಷ ರೂಪಾಯಿ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಎಂಬವರ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಪತ್ನಿ ಅಶ್ವಿನಿ ಕರೆತಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.