ಲಕ್ನೋ: ಜಗತ್ತಿನ ಪ್ರಮುಖ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸಂಸ್ಥೆ ಸ್ಯಾಮ್‍ಸಂಗ್ ಚೀನಾದಲ್ಲಿದ್ದ ತನ್ನ ಡಿಸ್‍ಪ್ಲೇ ತಯಾರಿಕಾ ಘಟಕವನ್ನು ಉತ್ತರ ಪ್ರದೇಶದ ನೋಯ್ಡಾಗೆ ಸ್ಥಳಾಂತರಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದ ಸಿಇಒ ಕೆನ್ ಕಾಂಗ್ ನೇತೃತ್ವದ ನಿಯೋಗ ನೋಯ್ಡಾದಲ್ಲಿ ಘಟಕದ ನಿರ್ಮಾಣ ಕಾಮಗಾರಿ ಕೆಲಸ ಈಗಾಗಲೇ ಮುಕ್ತಾಯವಾಗಿದೆ ಎಂದು ಸ್ಯಾಮ್‍ಸಂಗ್ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ಉತ್ತಮ ಕೈಗಾರಿಕಾ ವಾತಾವರಣ ಮತ್ತು ಹೂಡಿಕೆದಾರ ಸ್ನೇಹಿ ನೀತಿಗಳಿಂದಾಗಿ ಚೀನಾದಲ್ಲಿದ್ದ ಡಿಸ್‍ಪ್ಲೇ ಘಟಕವನ್ನು ನೋಯ್ಡಾಗೆ ಸ್ಥಳಾಂತರಿಸಿದ್ದೇವೆ ಎಂದು ಕಂಪನಿ ಹೇಳಿದೆ. ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದ ಯಶಸ್ಸಿಗೆ ಸ್ಯಾಮ್‍ಸಂಗ್‍ನ ನೋಯ್ಡಾ ಕಾರ್ಖಾನೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಸಿಎಂ ಯೋಗಿ ಅದಿತ್ಯನಾಥ್ ಹೇಳಿದ್ದು, ಇದರಿಂದಾಗಿ ರಾಜ್ಯದ ಯುವಕರಿಗೆ ರಾಜ್ಯದಲ್ಲಿ ಉದ್ಯೋಗ ಪಡೆಯಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
Advertisement
ಕಳೆದ ವರ್ಷ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಮುಂದಿನ 5 ವರ್ಷದಲ್ಲಿ 11 ಲಕ್ಷ ಕೋಟಿ ಹಣವನ್ನು ಭಾರತ ಮತ್ತು ವಿದೇಶದ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಲಿವೆ ಎಂದು ತಿಳಿಸಿದ್ದರು.
Advertisement
ಭಾರತವನ್ನು ಮೊಬೈಲ್ ಉತ್ಪಾದನಾ ಹಬ್ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್‍ಐ)ಯೋಜನೆಯನ್ನು ಆರಂಭಿಸಿದೆ. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ 1.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪಿಎಲ್‍ಐ ಯೋಜನೆ ಅಡಿ ಲಾಭ ಪಡೆದುಕೊಳ್ಳಲು ದೇಶದ ಮತ್ತು ವಿಶ್ವದ ಹಲವು ಕಂಪನಿಗಳು ಆಯ್ಕೆಯಾಗಿವೆ. ಇದನ್ನೂ ಓದಿ: ವಿಶ್ವದ ಅತಿದೊಡ್ಡ ಮೊಬೈಲ್ ಉತ್ಪಾದನಾ ಘಟಕ ನೋಯ್ಡಾದಲ್ಲಿ ಲೋಕಾರ್ಪಣೆ – ವಿಶೇಷತೆ ಏನು? ಎಷ್ಟು ಮಂದಿಗೆ ಉದ್ಯೋಗ ಸಿಗುತ್ತೆ?
ಪ್ರತಿ ತಿಂಗಳಿಗೆ ಸುಮಾರು 1.2 ಕೋಟಿ ಮೊಬೈಲ್ ಫೋನ್ ಗಳನ್ನು ತಯಾರಿಸುವ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ. ಪ್ರಸ್ತುತವಾಗಿ ಸ್ಯಾಮ್‍ಸಂಗ್ ಕಂಪನಿಯು ಭಾರತದಲ್ಲಿ 67 ಲಕ್ಷ ಸ್ಮಾರ್ಟ್ ಫೋನ್‍ಗಳನ್ನು ತಯಾರಿಸುತ್ತಿದೆ.