– ಭಾರತ ಚೀನಾ ನಡುವೆ ದೂರವಾಣಿ ಮಾತುಕತೆ
– ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ದೇಶಗಳ ಒಪ್ಪಿಗೆ
ನವದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಪೂರ್ವನಿಯೋಜಿತವಾಗಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ ಎಂದು ಭಾರತ ಚೀನಾಗೆ ಖಡಕ್ ಆಗಿ ತಿಳಿಸಿದೆ.
ಸೋಮವಾರ ರಾತ್ರಿ ಗಡಿಯಲ್ಲಿ ಎರಡು ರಾಷ್ಟ್ರಗಳ ಸೈನಿಕರ ಮಧ್ಯೆ ಘರ್ಷಣೆ ನಡೆದ ಬಳಿಕ ಬುಧವಾರ ಭಾರತದ ವಿದೇಶಾಂಗ ಇಲಾಖೆ ಸಚಿವ ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ವೈ ಮಧ್ಯೆ ದೂರವಾಣಿ ಮಾತುಕತೆ ನಡೆಯಿತು.
Advertisement
Wang Yi-S Jaishankar talks: Strong message conveyed by Indian Foreign Minister to China, “What happened in Galwan was premeditated and planned action by China which was responsible for the sequence of events.” pic.twitter.com/KVWtHgtylL
— ANI (@ANI) June 17, 2020
Advertisement
ಭಾರತ ಹೇಳಿದ್ದು ಏನು?
ಜೂನ್ 6 ರಂದು ನಡೆದ ಮಿಲಿಟರಿ ಕಮಾಂಡರ್ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.
Advertisement
Two sides should scrupulously & sincerely implement the understanding reached by Senior Commanders on June 6. Troops of both sides should also abide by bilateral agreements&protocols. They should strictly respect&observe LAC & shouldn't take any unilateral action to alter it: MEA https://t.co/dB6yN8hkOO
— ANI (@ANI) June 17, 2020
Advertisement
ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್ 6 ರಂದು ಕಮಾಂಡರ್ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.
In conclusion, it was agreed that overall situation would be handled in responsible manner&both sides would implement disengagement understanding of 6 June sincerely. Neither side would take any action to escalate matters&ensure peace as per bilateral agreements & protocols: MEA
— ANI (@ANI) June 17, 2020
ಚೀನಾ ಹೇಳಿದ್ದು ಏನು?
ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.
India must make sure similar incidents as that on Monday do not happen again. India must also not miscalculate the current situation, and not underestimate China's determination to safeguard its sovereignty and territory: Chinese FM Wang Yi told Indian FM #ChinaIndiaFaceoff https://t.co/LmSMi0Rxnu
— Global Times (@globaltimesnews) June 17, 2020
ಕೊನೆಯಲ್ಲಿ ಏನಾಯ್ತು?
ಎರಡು ದೇಶಗಳು ಯಾಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಒಪ್ಪಿಕೊಂಡಿದ್ದು, ಸಮಸ್ಯೆಯನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ..