ಚುನಾವಣಾ ಪ್ರಚಾರ ಮಾಡಲ್ಲ ಎಂದ ಮಮತಾ ಬ್ಯಾನರ್ಜಿ

Public TV
3 Min Read
Mamata banerjee

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನುಮುಂದೆ ಚುನಾವಣಾ ಪ್ರಚಾರ ನಡೆಸದೇ ಇರಲು ನಿರ್ಧರಿಸಿದ್ದಾರೆ.

Mamata Banerjee

ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಚುನಾವಣಾ ಪ್ರಚಾರ ನಡೆಸುವುದಿಲ್ಲ. ರಾಜ್ಯ ರಾಜಧಾನಿಯಲ್ಲಿ ನಡೆಯುವ ಪ್ರಚಾರದ ಕೊನೆಯ ದಿನವಾದ ಎಪ್ರಿಲ್ 26ರಂದು ಸಾಂಕೇತಿಕವಾಗಿ ಸಭೆ ನಡೆಸಲಿದ್ದಾರೆ. ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ನಿಗದಿಯಾಗಿರುವ ಪ್ರಚಾರ ಸಮಯವನ್ನು ಸಮಯವನ್ನು ಕಡಿತಗೊಳಿಸಲಾಗಿದ್ದು, ಹೀಗಾಗಿ ಮಮತಾ ಬ್ಯಾನರ್ಜಿ ಅವರ ಪ್ರಚಾರ ಸಮಯವನ್ನು ಕೇವಲ 30 ನಿಮಿಷಕ್ಕೆ ನಿಬರ್ಂಧಿಸಲಾಗಿದೆ ಎಂದು ಟಿಎಂಸಿ ರಾಜ್ಯಸಭಾ ಸಂಸದ ಒಬ್ರಿಯಾನ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಮಮತಾ ಬ್ಯಾನರ್ಜಿ, ತನ್ನ ಪಕ್ಷವು ಕೋಲ್ಕತ್ತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣಗಳನ್ನು ಮಾಡುವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರದ್ದು ಮಾಡಿರುವುದಾಗಿ ನಿನ್ನೆ ಪ್ರಕಟಿಸಿದ್ದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಬೃಹತ್ ರ್ಯಾಲಿಗಳನ್ನು ಆಯೋಜಿಸಿದಾಗ ಉಂಟಾಗುವ ಪರಿಣಾಮದ ಬಗ್ಗೆ ಎಲ್ಲ ರಾಜಕೀಯ ನಾಯಕರು ಗಂಭೀರವಾಗಿ ಚಿಂತಿಸಬೇಕು ಎಂದು ನಾನು ಸಲಹೆ ನೀಡುತ್ತಿದ್ದೇನೆ. ನಾನು ಎಲ್ಲ ಸಾರ್ವಜನಿಕ ರ‍್ಯಾಲಿಗಳನ್ನು ಬಂದ್ ಮಾಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್‍ನಲ್ಲಿ ಹೇಳಿದ್ದಾರೆ.

8 ಹಂತದ ವಿಧಾನಸಾಭಾ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ 5 ಹಂತದ ಚುನಾವಣೆ ಅಂತ್ಯವಾಗಿದ್ದು, 3 ಹಂತದ ಚುನಾವಣೆ ಬಾಕಿ ಇದೆ. ಕೊರೊನಾ ಪ್ರಕರಣ ದಿಢೀರನೆ ಏರಿಕೆ ಕಂಡಿದೆ. ಮೊದಲ 5 ಹಂತದ ಚುನಾವಣೆ ವೇಳೆ ಬಿಜೆಪಿ, ಟಿಎಂಸಿ ಸೇರಿದಂತೆ ಎಲ್ಲ ಪಕ್ಷಗಳು ಆರೋಗ್ಯ ಸಚಿವಾಲಯ ಆದೇಶಿಸಿದ್ದ, ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿವೆ.

vote

ರಾಜಕೀಯ ಬೃಹತ್ ರ‍್ಯಾಲಿ ಮತ್ತು ರೋಡ್ ಶೋಗಳನ್ನು ಮಾಡಿ ಕೊರೊನಾ ನಿಯಮವಾದ ಸಾಮಾಜಿಕ ಅಂತರ, ಮಾಸ್ಕ್‍ಗಳನ್ನು ಹಾಕುವ ನಿಯಮಗಳನ್ನು ಫಾಲೋ ಮಾಡದೆ ನಿಯಮವನ್ನು ಗಾಳಿಗೆ ತೋರಿದೆ. ಹೀಗಾಗಿ ಸಂಜೆ 7 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಯಾವುದೇ ರ‍್ಯಾಲಿ, ಸಾರ್ವಜನಿಕ ಸಭೆ, ಬೀದಿ ನಾಟಕ, ಬೀದಿಸಭೆಗಳಿಗೆ ಅನುಮತಿ ಇಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದೆ.

vote voting woman

ಸ್ಟಾರ್ ಪ್ರಚಾರಕರು, ರಾಜಕೀಯ ನಾಯಕರು, ಅಭ್ಯರ್ಥಿಗಳು ಚುನಾವಣಾ ವೇಳೆ ಕೊವೀಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಚುನಾವಣಾ ಆಯೋಗ ಕೊರೊನಾ ಸೋಂಕು ಅಪಾಯವನ್ನು ಸ್ವಯಂ ಆಹ್ವಾನಿಸುವುದಲ್ಲದೆ ಇತರರಿಗೂ ಹರಡಲು ಕಾರಣವಾಗುತ್ತಿದ್ದಾರೆ ಎಂದು ಗರಂ ಆಗಿತ್ತು.

Share This Article
Leave a Comment

Leave a Reply

Your email address will not be published. Required fields are marked *