ಲಕ್ನೋ: ಚುನಾವಣೆಗೆ ಮಹಿಳಾ ಮೀಸಲಾತಿ ಸಿಗುತ್ತದೆ ಎಂದು ವ್ಯಕ್ತಿಯೊಬ್ಬ 45ನೇ ವಯಸ್ಸಿನಲ್ಲಿ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕರಣ್ ಚಾಪ್ರಾ ಗ್ರಾಮದ ಹಾಥಿ ಸಿಂಗ್(45) ಮದುವೆಯಾದ ವ್ಯಕ್ತಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಯುತ್ತಿದೆ. ಚುನವಣೆಯಲ್ಲಿ ಮಹಿಳಾ ಅಭ್ಯರ್ಥಿಗೆ ಮೀಸಲಾತಿ ನೀಡಲಾಗಿದೆ. ಹೇಗಾದರೂ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದಾಗಿ ಮದುವೆಯಾಗಿದ್ದಾರೆ.

ಈ ಹಿಂದೆ 2015ರಲ್ಲಿ ಹಾಥ್ ಸಿಂಗ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಆದರೆ ಈ ಬಾರಿ ಮತ್ತೆ ಅದೃಷ್ಟ ಪರೀಕ್ಷಗೆ ಇಳಿದಿದ್ದಾರೆ. ಚುನಾವಣಾ ಆಯೋಗ ನೀಡಿದ ಮೀಸಲಾತಿ ಪಟ್ಟಿಯ ಅನ್ವಯ ಹಾಥ್ ಸಿಂಗ್ ಸ್ಪರ್ಧೆ ಮಾಡಬೇಕಿದ್ದ ವಾರ್ಡ್‍ನಲ್ಲಿ ಮಹಿಳೆಗೆ ಮೀಸಲಾತಿ ನೀಡಲಾಗಿತ್ತು. ಹೀಗಾಗಿ ತನಗೆ ಚುನಾವಣೆಗೆ ನಿಲ್ಲಲು ಅವಕಾಶವಿಲ್ಲ ಎಂದು ಅದೇ ಗ್ರಾಮದ ಯುವತಿಯನ್ನು ಮದುವೆಯಾಗಿದ್ದಾರೆ. ಈ ಮೂಲಕವಾಗಿ ತನ್ನ ಪತ್ನಿಯನ್ನು ಚುನಾವಣಾ ಕಣಕ್ಕೆ ಇಳಿಸಿದ್ದಾರೆ.



