ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆ- ಟಿಎಂಸಿ ಸೇರಿದ ಯಶವಂತ್ ಸಿನ್ಹಾ

Public TV
2 Min Read
yashwant sinha

ಕೋಲ್ಕತ್ತಾ: ರಾಜಕಾರಣದಿಂದ ಸನ್ಯಾಸವನ್ನು ತೆಗೆದುಕೊಳ್ಳುತ್ತಿದ್ದೇನೆ, ಬಿಜೆಪಿಯನ್ನು ತೊರೆದಿದ್ದೇನೆ ಎಂದು ಹೇಳಿದ್ದ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಇದೀಗ ತೃಣ ಮೂಲ ಕಾಂಗ್ರೆಸ್‍ಗೆ ಸೆರ್ಪಡೆಯಾಗಿದ್ದಾರೆ.

ಯಶವಂತ್ ಸಿನ್ಹಾ(83)ರವರು, ಡೆರೆಕ್ ಓ ಬ್ರಾಯನ್, ಸುದೀಪ್ ಬಂದೋಪಾಧ್ಯಾಯ ಹಾಗೂ ಸುಬ್ರತ್ ಮುಖರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡಗೊಂಡಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳ ರಾಜಕೀಯ ಕಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಈ ಹಿಂದೆ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ, ಪಕ್ಷಾಧಾರಿತ ರಾಜಕೀಯ ಮಾಡುವುದಿಲ್ಲ, ಯಾವುದೇ ಉನ್ನತ ಹುದ್ದೆಯ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ದರು.

ಯಶವಂತ್ ಸಿನ್ಹಾ ನಮ್ಮ ಪಕ್ಷಕ್ಕೆ ಸೇರಿರುವುದು ಸಂತಸವಾಗಿದೆ. ನಂದಿಗ್ರಾಮದಲ್ಲಿ ನಡೆದ ಹಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ. ಹೀಗಾಗಿ ಇಂದು ಈ ಸಂತಸದಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸುಬ್ರತ್ ಮುಖರ್ಜಿ ಹೇಳಿದ್ದಾರೆ.

1990ರಲ್ಲಿ ಹಣಕಾಸು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಭಾರತ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *