ಮಂಗಳೂರು: ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣಾ ಕಾವು ಹೆಚ್ಚಾಗಿದ್ದು,ಎಲ್ಲೆಡೆ ಭರದ ಸಿದ್ದತೆ ನಡೆಯುತ್ತಿದೆ. ಇದರ ನಡುವೆ ಕಾಂಗ್ರೆಸ್ ಬೆಂಬಲಿತ ಮಹಿಳಾ ಅಭ್ಯರ್ಥಿ ಚುನಾವಣೆ ನಡೆಯುವ ಮೊದಲೇ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಚ್ಚರಿಯ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಚುನಾವಣೆ ಬಂದಾಗ ಪಕ್ಷಾಂತರ ಆಗೋದು ಮಾಮೂಲಿ ಆದರೂ ಇಲ್ಲಿ ಅಭ್ಯರ್ಥಿಯೇ ಪಕ್ಷಾಂತರ ಆಗುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅನಿತಾ ಕೂವೆಂಜ ನಾಮಪತ್ರ ಸಲ್ಲಿಸಿದ್ದರು.
Advertisement
Advertisement
ಕಳೆದ ತಾಲೂಕು ಪಂಚಾಯತ್ ಚುನಾವಣೆಯಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಇದೀಗ ಕಾಂಗ್ರೆಸ್ ಬೆಂಬಲದಿಂದ ನಾಮಪತ್ರ ಸಲ್ಲಿಸಿದ್ದ ಅನಿತಾ ಚುನಾವಣೆ ನಡೆಯಲು ಇನ್ನೂ ಕೆಲ ದಿನ ಬಾಕಿ ಇರುವಾಗಲೇ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
Advertisement
ಇಂದು ಬಿಜೆಪಿಯ ಪುತ್ತೂರು ಕಚೇರಿಯಲ್ಲಿ ಕಾಣಿಸಿಕೊಂಡ ಅನಿತಾರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಪಕ್ಷದ ಧ್ವಜ ನೀಡುವುದರ ಮೂಲಕ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು.