ಹಾಸನ: ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸುಳಿವನ್ನು ಸಿಎಂ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನೀಡಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಗೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂ ಟಿಕೆಟ್ ನೀಡಿದ್ರೆ ಖಂಡಿತ ಸ್ಪರ್ಧಿಸುತ್ತೇನೆ. ನಾನು ಅಖಿಲಭಾರತ್ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಆದಾಗನಿಂದ ಅರಸೀಕೆರೆಯಲ್ಲಿ ಓಡಾಟ ಮಾಡುತ್ತಿದ್ದೇನೆ. ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದು, ಅರಸೀಕೆರೆ ವಿಧಾನಸಭೆ ಕ್ಷೇತ್ರದ ಡಿಎಂ ಕುರ್ಕೆಯ ಬೂತ್ ನಂ 42 ರಲ್ಲಿ ನನ್ನ ಮತವಿದೆ. ನಾನು ಇದು ನನ್ನ ಊರು ಎಂದು ವಿಶೇಷ ಗಮನ ಕೊಡುತ್ತಿದ್ದೇನೆ ಎಂದರು.
ನಾನು ಖಂಡಿತ ಎಂಎಲ್‍ಎ ಚುನಾವಣೆ ಆಕಾಂಕ್ಷಿ ಅಲ್ಲ. ಒಂದು ವೇಳೆ ಪಕ್ಷ ನಾನೇ ಚುನಾವಣೆಗೆ ನಿಲ್ಲಬೇಕು ಎಂದು ಆದೇಶ ಕೊಟ್ಟರೆ ನಿಲ್ಲುತ್ತೇನೆ ಎಂದರು. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಹಾಸನದ ಅರಸೀಕೆರೆ ಕ್ಷೇತ್ರದಲ್ಲಿ ಎನ್.ಆರ್.ಸಂತೋಷ್ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದ್ದಾರೆ. ಎನ್‍ಆರ್.ಸಂತೋಷ್ ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅರಸೀಕೆರೆ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.