ನವದೆಹಲಿ: ಮುಂದೆ ಚುನಾವಣೆ ನಡೆಯಲಿರುವ ರಾಜ್ಯಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಆ ರಾಜ್ಯಗಳಲ್ಲಿ ಮೆಗಾ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಮುಂದಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡಿಗೆ ಅನುದಾನವನ್ನು ಪ್ರಕಟಿಸಿದ್ದಾರೆ.
Advertisement
Advertisement
ತಮಿಳುನಾಡಿನಲ್ಲಿ 3,500 ಕಿ.ಮೀ ಕಾರಿಡಾರ್, ಕೇರಳಕ್ಕೆ 65 ಸಾವಿರ ಕೋಟಿ ರೂ., ಪಶ್ಚಿಮ ಬಂಗಾಳಕ್ಕೆ 95 ಸಾವಿರ ಕೋಟಿ ರೂ., ಅಸ್ಸಾಂನಲ್ಲಿ ಮುಂದಿನ ಮೂರು ವರ್ಷದಲ್ಲಿ 1,300 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 6,500 ಕಿ.ಮೀ ಹೆದ್ದಾರಿ ನಿರ್ಮಾಣ
Advertisement
ನಿರ್ಮಲಾ ಸೀತಾರಾಮನ್ ಯೋಜನೆಗಳನ್ನು ಪ್ರಕಟಿಸುತ್ತಿದ್ದಂತೆ ಈಗ ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಇದು ಕೇಂದ್ರ ಬಜೆಟ್ ಅಲ್ಲ ರಾಜ್ಯಗಳ ಚುನಾವಣಾ ಬಜೆಟ್ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ವ್ಯಕ್ತವಾಗಿದೆ.