ಹಾಸನ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂಬ ಭವಿಷ್ಯ ನುಡಿಯಲು ನಮ್ಮಬಳಿ ಕೊರವಂಜಿಗಳಿದ್ದಾರೆ ಎಂದು ಹಾಸನದಲ್ಲಿ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: 1.25 ಲಕ್ಷಕ್ಕೆ ಮಾರಾಟವಾದ ಎರಡು ಬಂಡೂರು ಟಗರು
Advertisement
ಹಾಸನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಇದೇ ವೇಳೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಡಿಕೆಶಿ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ಕುರಿತಾಗಿ ಭವಿಷ್ಯ ಹೇಳಲು ನಮ್ಮಬಳಿ ಮೂವರು ಕೊರವಂಜಿಗಳಿದ್ದಾರೆ. ದೊಡ್ಡವರ ಕಥೆ ನಾನೇನು ಹೇಳಲ್ಲ ಎಂದಿದ್ದಾರೆ. ಇದನ್ನೂ ಓದಿ: ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು
Advertisement
Advertisement
ಸರ್ಕಾರ ಕೂಡಲೇ ಕೊರೊನಾ ಮೂರನೇ ಅಲೆ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಹಾಸನ ಜಿಲ್ಲಾಧಿಕಾರಿ ಈಗಾಗಲೇ ಮೂರನೇ ಅಲೆಗೆ ಏನುಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿದ್ದಾರೆ. ಆದರೆ ಸರ್ಕಾರ ಇದುವರೆಗೂ ಏನನ್ನೂ ಮಾಡಿಲ್ಲ. ಮೂರನೇ ಅಲೆ ವೇಗವಾಗಿ ಹಬ್ಬುತ್ತಿದ್ದು, ಸರ್ಕಾರ ಕೂಡಲೇ ಎಲ್ಲಾ ಆಸ್ಪತ್ರೆಗಳಲ್ಲೂ ಕನಿಷ್ಟ ನೂರು ಬೆಡ್ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಕಳುಹಿಸಿಕೊಟ್ಟಿರುವ ಬೇಡಿಕೆ ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಿಂಗಾಯತರ ಧೀಮಂತ ನಾಯಕ ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ: ಎಂ.ಬಿ ಪಾಟೀಲ್