– ಪತಿ, ಇಬ್ಬರು ಮಕ್ಕಳನ್ನ ಬಿಟ್ಟು ಸೂಸೈಡ್
ಹೈದರಾಬಾದ್: ಮಹಿಳಾ ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಹೈದರಾಬಾದ್‍ನ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ರಮ್ಯಾಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಉದ್ಯೋಗಿ. ಜಿಲ್ಲೆಯ ಲಕ್ಷ್ಮಿ ನರಸಿಂಹ ಸ್ವಾಮಿ ಕಾಲೋನಿಯಲ್ಲಿರುವ ಸಾಮ್ರಾಟ್ ಅಪಾರ್ಟ್‌ಮೆಂಟ್‌ನಲ್ಲಿ ರಮ್ಯಾಕೃಷ್ಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಮ್ಯಾಕೃಷ್ಣ ಐದು ವರ್ಷಗಳ ಹಿಂದೆ ಗೋಪಿ ಎಂಬವರು ಜೊತೆ ಮದುವೆಯಾಗಿದ್ದರು. ಈ ದಂಪತಿಗೆ ಅವಳಿ ಮಕ್ಕಳಿದ್ದಾರೆ. ಆಕೆಯ ಪತಿ ಗೋಪಿ ಕೂಡ ಸಾಫ್ಟ್‌ವೇರ್ ಉದ್ಯೋಗಿ. ಆದರೆ ಈಗ ರಮ್ಯಾಕೃಷ್ಣರ ಆತ್ಮಹತ್ಯೆಯಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ರಮ್ಯಾಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದ ರೂಮಿನಲ್ಲಿ ಡೆತ್‍ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಮ್ಯಾರ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ನಾವು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮಗೆ ಯಾವುದೇ ಆರ್ಥಿಕ ಸಮಸ್ಯೆಗಳಿಲ್ಲ ಹಾಗೂ ಕುಟುಂಬದಲ್ಲೂ ಜಗಳಗಳಿಲ್ಲ ಎಂದು ರಮ್ಯಾಕೃಷ್ಣ ಪತಿ ಗೋಪಿ ಹೇಳಿದ್ದಾರೆ. ಆದರೆ ರಮ್ಯಾಕೃಷ್ಣ ಪೋಷಕರು ಗೋಪಿ ನಮ್ಮ ಮಗಳ ಜೊತೆ ಯಾವಾಗಲೂ ಜಗಳ ಮಾಡುತ್ತಿದ್ದನು ಎಂದು ಆರೋಪಿಸಿದ್ದಾರೆ. ಆಕೆಯ ಆತ್ಮಹತ್ಯೆಗೆ ಜಗಳ ಕಾರಣವೇ? ಅಥವಾ ಬೇರೆ ಯಾವುದಾದರೂ ಸಮಸ್ಯೆಗಳಿವೆಯೇ? ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.