ಚಾಮರಾಜನಗರ: ಜಮೀರ್ ಮನೆ ಮೇಲೆ ನಡೆದಿರುವ ಇಡಿ ದಾಳಿಯನ್ನು ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ ದಾಳಿಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಮೀರ್ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿರೋಧ ಪಕ್ಷದ ನಾಯಕರು, ಮುಖಂಡರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇಡಿ, ಐಟಿ ದಾಳಿ ಮಾಡಬೇಡಿ ಅಂತಾ ಹೇಳಲ್ಲ. ಆದರೆ ವಿರೋಧ ಪಕ್ಷದ ಮುಖಂಡರನ್ನು ಗುರಿಯಾಗಿಸಿ ದಾಳಿ ನಡೀತಿದೆ. ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಟಾಲಿನ್ ಸೇರಿದಂತೆ ಹಲವು ಮುಖಂಡರ ಮೇಲೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೇಲೂ ದಾಳಿ ನಡೆದಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೇಲೂ ಕೂಡ ಇಡಿ, ಸಿಬಿಐ, ಐಟಿ ಸೇರಿದಂತೆ ದಾಳಿ ನಡೆದಿದೆ. ಆದರೆ ಬಿಜೆಪಿ ನಾಯಕರ ಮನೆ ಮೇಲೆ ಯಾವುದೇ ದಾಳಿ ನಡೆದಿಲ್ಲ. ಇದು ನೂರಕ್ಕೆ ನೂರರಷ್ಟು ಇದು ರಾಜಕೀಯ ಪ್ರೇರಿತ ದಾಳಿ. ಯತ್ನಾಳ್, ವಿಶ್ವನಾಥ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರನ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಓರಿಸಿಯಸ್ ಬ್ಯಾಂಕ್ ನಲ್ಲಿ ಹಣವಿಟ್ಟಿದ್ದಾರೆ ಅಂತಾ ಆರೋಪ ಮಾಡಿದ್ದರು. ಆ ವೇಳೆ ಯಾಕೆ ಅವರ ಮೇಲೆ ಐಟಿ, ಇಡಿ ದಾಳಿ ಮಾಡಿಲ್ಲ ಅಂತಾ ಕಿಡಿಕಾರಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!