ಚಿಕ್ಕಮಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ಯಾವುದೇ ರಾಜಕೀಯ ವಿಚಾರವಾಗಿ ಸಭೆ ನಡೆದಿಲ್ಲ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಸಿಗದೇ ಇದ್ದದ್ದು ಸದ್ಯ ಅಪ್ರಸ್ತುತ. ಅಭಿವೃದ್ಧಿ ದೃಷ್ಟಿಯಿಂದ ಭೇಟಿ ಮಾಡಿ ಮಾತನಾಡಿದ್ದೇನೆಯೇ ಹೊರತು ರಾಜಕೀಯವಾಗಿ ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.
Advertisement
Advertisement
ಖಾತೆ ಕಗ್ಗಂಟು ಮುಗಿಯುತ್ತಿದ್ದಂತೆ ಇದೀಗ ಬಿಜೆಪಿಯ ಮತ್ತೊಂದು ಸ್ಫೋಟಕ ಸುದ್ದಿ ಹೊರ ಬಿದ್ದಿದೆ. ಈ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆ ನೋವು ಶುರುವಾಗಿದೆ. ಖಾತೆ ಅಸಮಾಧಾನದ ಮಧ್ಯೆ ಇದೀಗ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ.
Advertisement
Advertisement
ಕಾಫಿನಾಡು ಚಿಕ್ಕಮಗಳೂರು ಹೊರವಲಯದ ಸರಾಯ್ ರೆಸಾರ್ಟ್ ನಲ್ಲಿ ಅತೃಪ್ತರ ಸಭೆ ನಡೆದಿದೆ. ಸಭೆಗೆ ಹಾಜರಾಗಲು ನಿನ್ನೆ ರಾತ್ರಿಯೇ ನಾಲ್ವರು ಸಚಿವರು ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಗೌಪ್ಯ ಸಭೆಯಲ್ಲಿ ಸಿ.ಪಿ ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.