ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆಗೆ ಮಾಜಿ ಸಚಿವ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ. ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ ನ್ಯಾಯ ಎಲ್ಲಿದೆ ಎಂದು ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
Advertisement
ಕಾನೂನು ಕೈಗೆತ್ತಿಕೊಂಡರೆ,ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ.(1) @CMofKarnataka @BSYBJP @BSBommai
— UT Khadér (@utkhader) July 28, 2020
Advertisement
ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ರಾಮ್ ಸೇನಾ ಅಭಿಮಾನಿ ಬಳಗ ಅನ್ನೋ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕಿಡಿಗೇಡಿಯೋರ್ವ “ಮೊದಲು ಇವಳನ್ನು ಕಡಿದು ಕೊಲ್ಲಬೇಕು”(ಫಸ್ಟ್ ಮೊಲೆನ್ ಕರ್ತ್ ಕೆರೋಡು)ಎಂದು ತುಳುಭಾಷೆಯಲ್ಲಿ ಮೆಸೇಜ್ ಹಾಕಿದ್ದಾನೆ. ಈ ಮೆಸೇಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.
Advertisement
ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ…….
ಉತ್ತರಿಸು ಸರ್ಕಾರ #ನ್ಯಾಯ ಎಲ್ಲಿದೆ ? ? ?@CMofKarnataka @BSYBJP @BSBommai
— UT Khadér (@utkhader) July 28, 2020
Advertisement