ಬೆಂಗಳೂರು: ಲಾಕ್‍ಡೌನ್ ವಿಸ್ತರಣೆ ಮಾಡಿ ಎಂದು ತಜ್ಞರು ಯಾವುದೇ ವರದಿ ಕೊಟ್ಟಿಲ್ಲ. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಬಿಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಲಾಕ್‍ಡೌನ್ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ. ಜೂನ್ 5, 6 ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು, ತಜ್ಞರ ಜತೆ, ಸಚಿವರ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
Advertisement
Advertisement
ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ. ಅಲ್ಲದೆ ಲಾಕ್ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಹೀಗಾಗಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದರು.
Advertisement
ಕೇಂದ್ರ ಸರ್ಕಾರ ಕೂಡ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ. ಹೀಗಾಗಿ ನಾವು ಸಹ ಇಲ್ಲಿನ ಪರಿಸ್ಥಿತಿ ನೋಡಿಕೊಂಡು ನಿರ್ಧಸುತ್ತೇವೆ. ಸದ್ಯ ಎರಡನೇ ಹಂತದ ಪರಿಹಾರ ಪ್ಯಾಕೇಜ್ ರೆಡಿಯಾಗುತ್ತಿದೆ ಎಂದು ಹೇಳಿದರು.
Advertisement
ಕೇಂದ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ಇಂದು ಏಳು ವರ್ಷ ತುಂಬಿದ ಹಿನ್ನೆಲೆ ಸಿಎಂ ಯಡಿಯೂರಪ್ಪನವರು ತಮ್ಮ ಕಾವೇರಿ ನಿವಾಸ ಬಳಿ ಪೌರಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದರು.