– ನನಗೆ ಅನೇಕ ಅತ್ಯಾಚಾರ, ಕೊಲೆ ಬೆದರಿಕೆಗಳು ಬರ್ತಿವೆ
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಬಿಹಾರದಲ್ಲಿ ದಾಖಲಿಸಿರುವ ಎಫ್ಐಆರ್‌ನಲ್ಲಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: 43 ದಿನಗಳ ಬಳಿಕ ದೂರು ದಾಖಲಿಸಿದ್ದೇಕೆ? ಸುಶಾಂತ್ ತಂದೆ ಸ್ಪಷ್ಟನೆ
ಇತ್ತೀಚೆಗೆ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ತಂದೆ, ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿ ವಿರುದ್ಧ ಪಾಟ್ನಾದಲ್ಲಿ ಎಫ್‍ಐಆರ್ ದಾಖಲಿಸಿದ್ದರು. ಇದೀಗ ಈ ತನಿಖೆಯನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬುಧವಾರ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
Advertisement
Advertisement
ಅಲ್ಲದೇ ಸುಶಾಂತ್ ಸಿಂಗ್ ಸಾವಿನಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಇದರಿಂದ ನನಗೂ ಅನೇಕ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ. ಜೊತೆಗೆ ಜೂನ್ 8 ರವರೆಗೆ ಸುಶಾಂತ್ ಜೊತೆ ಲಿವ್-ಇನ್ ರಿಲೇಷನ್‍ಶಿಪ್‍ನಲ್ಲಿದ್ದೆ ಎಂಬ ಮಾಹಿತಿಯನ್ನ ಕೂಡ ಸುಪ್ರೀಂ ಕೋರ್ಟಿಗೆ ನೀಡಿದ್ದಾರೆ. ಇದನ್ನೂ ಓದಿ: ಬಾಲಿವುಡ್‍ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್
Advertisement
ರಿಯಾ ಸಲ್ಲಿಸಿರೋ ಅರ್ಜಿಯಲ್ಲಿ ಏನಿದೆ?
ಪ್ರಸ್ತುತ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿರುವ ಎಫ್ಐಆರ್‌ನಲ್ಲಿ ತಪ್ಪಾಗಿ ಹೇಳಿಕೆ ನೀಡಿದ್ದು, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಅಲ್ಲದೇ ಪಟ್ನಾದಲ್ಲಿ ಅವರಿಗೆ ಬಹಳ ಪ್ರಭಾವ ಇದೆ. ಇದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ನ್ಯಾಯ ಸಮ್ಮತ ತನಿಖೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಬಿಹಾರದಲ್ಲಿ ದಾಖಲಿಸಿರುವ ಎಫ್ಐಆರ್‌ನ ತನಿಖೆಯನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ತಮ್ಮ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
Advertisement
ಸುಶಾಂತ್ ಕೆಲವು ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಆದರೆ ಜೂನ್ 14ರಂದು ಅವರು ಬಾಂದ್ರಾದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಸುಶಾಂತ್ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಿಯಾ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ಕೊಟ್ಟಿದ್ದಾಳೆ: ಸುಶಾಂತ್ ತಂದೆ ಗಂಭೀರ ಆರೋಪ
ಅಷ್ಟೇ ಅಲ್ಲದೇ ರಿಯಾ ಸಲ್ಲಿಸಿರುವ ಅರ್ಜಿಯಲ್ಲಿ, ನಾನು ಜೂನ್ 8, 2020 ರವರೆಗೆ ಸುಶಾಂತ್ ಸಿಂಗ್ ಜೊತೆ ಲಿವ್ ಇನ್ ರಿಲೇಷನ್‍ಶಿಪ್‍ನಲ್ಲಿದ್ದೆ ಎಂಬ ಮಾಹಿತಿಯನ್ನ ಕೋರ್ಟಿಗೆ ನೀಡಿದ್ದಾರೆ. ಅದಾದ ಬಳಿಕ ನಾನು ತಾತ್ಕಾಲಿಕವಾಗಿ ಮುಂಬೈನಲ್ಲಿರುವ ನನ್ನ ಸ್ವಂತ ನಿವಾಸಕ್ಕೆ ಸ್ಥಳಾಂತರಗೊಂಡೆ. ನಟನ ಸಾವಿನಿಂದಾಗಿ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಜೊತೆಗೆ ನಟನ ಸಾವಿನ ನಂತರ ಅನೇಕ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದ್ದಾರೆ.
ತಮಗೆ ಬರುತ್ತಿದ್ದ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳ ವಿರುದ್ಧ ಕ್ರೂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಂದ್ರಾ ಪೊಲೀಸರು ಹಲವು ಬಾರಿ ಸಮನ್ಸ್ ನೀಡಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಮುಂಬೈ ಪೊಲೀಸರ ತನಿಖೆ ಇನ್ನೂ ನಡೆಯುತ್ತಿದೆ. ಈ ಮಧ್ಯೆ ಸುಶಾಂತ್ ಸಿಂಗ್ ತಂದೆ ನನ್ನ ಮೇಲೆ ಬಿಹಾರದಲ್ಲಿ ಪ್ರಭಾವದಿಂದ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ಬಿಹಾರದ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಎಫ್ಐಆರ್‌ನ ತನಿಖೆಯನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.