ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೋಮ್ ಐಸೋಲೇಷನ್ ನಲ್ಲಿದ್ದಾರೆ. ಜೆ.ಪಿ.ನಡ್ಡಾ ಮೂರು ದಿನಗಳ ಹಿಂದೆ ಪಶ್ಚಿಮ ಬಂಗಾಳದ ಪ್ರವಾಸದಲ್ಲಿದ್ದರು. ತಮಗೆ ಕೊರೊನಾ ತಗುಲಿರೋದನ್ನ ಜೆ.ಪಿ.ನಡ್ಡಾ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
Advertisement
ಕೊರೊನಾ ಲಕ್ಷಣಗಳ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ನಾನು ಆರೋಗ್ಯವಾಗಿದ್ದು, ವೈದ್ಯರ ಸಲಹೆ ಮತ್ತು ನಿರ್ದೇಶನವನ್ನ ಪಾಲಿಸುತ್ತಿದ್ದೇನೆ. ಮನೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿದ್ದು, ನನ್ನ ಸಂಪರ್ಕದಲ್ಲಿ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಜೆ. ಪಿ.ನಡ್ಡಾ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Advertisement
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है, डॉक्टर्स की सलाह पर होम आइसोलेशन में सभी दिशा- निर्देशो का पालन कर रहा हूँ। मेरा अनुरोध है, जो भी लोग गत कुछ दिनों में संपर्क में आयें हैं, कृपया स्वयं को आइसोलेट कर अपनी जाँच करवाएं।
— Jagat Prakash Nadda (@JPNadda) December 13, 2020
Advertisement
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,57,380ಕ್ಕೆ ಏರಿಕೆಯಾಗಿದ್ದು, 3,54,904 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೇಶದಲ್ಲಿ ಕೊರೊನಾಗೆ 1,43,055 ಮಂದಿ ಬಲಿಯಾಗಿದ್ದಾರೆ.
Advertisement