ಹುಬ್ಬಳ್ಳಿ: ರಾಜ್ಯದಲ್ಲಿ ಜೈನ ಸಮುದಾಯದ ಬಹುತೇಕ ಜನರು ಕೂಡ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಜೈನ ಸಮುದಾಯವನ್ನು ಅಭಿವೃದ್ಧಿಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ರಾಜ್ಯಸರ್ಕಾರ ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ದಿಗಂಬರ ಜೈನ ಸಮಾಜದ ಉಪಾಧ್ಯಕ್ಷ ವಿಮಲ್ ತಾಳಿಕೋಟಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿ ಮಾತನಾಡಿದ ಅವರು, ಅಭಿವೃದ್ಧಿಯಿಂದ ವಂಚಿತರಾದ ಸಮುದಾಯಗಳ ಬಗೆಗಿನ ರಾಜ್ಯ ಸರ್ಕಾರದ ಕಾಳಜಿ ಪ್ರಶಂಸನೀಯವಾಗಿದ್ದು, ರಾಜ್ಯದಲ್ಲಿ ಅಲ್ಪಸಂಖ್ಯಾತವಾಗಿರುವ ಹಾಗೂ ಅಭಿವೃದ್ಧಿಯಿಂದ ಹಿಂದುಳಿದ ಜೈನ ಸಮುದಾಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದರು.
Advertisement
Advertisement
ಈಗಾಗಲೇ ಜೈನ ಸಮಾಜದ ಮುಖಂಡರೊಂದಿಗೆ ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದ್ದು, ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಲಾಗುತ್ತದೆ ಎಂದು ಅವರು ಹೇಳಿದರು. ಪ್ರಾಚೀನ ಕಾಲದಿಂದಲೂ ಕನ್ನಡ ನಾಡನ್ನು ಕಟ್ಟಿ ಪೋಷಿಸಲು ಜೈನ ಸಮುದಾಯದವರು ಸಾಕಷ್ಟು ಶ್ರಮವಹಿಸಿದ್ದಾರೆ. ಈ ನಿಟ್ಟಿನಲ್ಲಿ ಜೈನ ಸಮುದಾಯವನ್ನು ಪರಿಗಣನೆಗೆ ತೆಗೆದುಕೊಂಡು ಜೈನ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಬೇಕು ಎಂದು ಅವರು ಹೇಳಿದರು.