ಚೆನ್ನೈ: ಅಕ್ರಮ ಆಸ್ತಿಗಳಿಕೆ ಕೇಸ್‍ನಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‍ಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.
Advertisement
ಶಶಿಕಲಾಗೆ ಸಂಬಂಧಿಸಿದ 2000 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಳವರಸಿ, ಸುಧಾಕರನ್‍ಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಲಾಗಿದೆ. ಸಿರುತ್ತಾವೂರ್, ಕೊಡನಾಡಿನಲ್ಲಿರುವ 300 ಕೋಟಿ ಮೌಲ್ಯದ ಆಸ್ತಿಯೂ ಇದ್ರಲ್ಲಿ ಸೇರಿದೆ. ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ ಐಟಿ ಇಲಾಖೆ, ಜಯಲಲಿತಾ ಆಪ್ತೆ ಶಶಿಕಲಾ ಅವರಿಗೆ ಸೇರಿದ್ದ 2 ಸಾವಿರ ಕೋಟಿ ರೂ. ಮೌಲ್ಯಸ ಆಸ್ತಿ ಮಾಡಿಕೊಂಡಿರುವುದಾಗಿ ತಿಳಿಸಿದೆ.
Advertisement
Income Tax Department today attached assets belonging to former CM J Jayalalithaa's aide Sasikala in Kodanad and Siruthavur areas of Tamil Nadu. Assets worth Rs 2000 crore frozen: Income Tax Department pic.twitter.com/WPmT0cBeVV
— ANI (@ANI) October 7, 2020
Advertisement
ತಮಿಳುನಾಡು, ಪುದುಚೇರಿಯಲ್ಲಿ ಶಶಿಕಲಾ, ಪತಿ ನಟರಾಜನ್ ಹಾಗೂ ಸಂಬಂಧಿಗಳಿಗೆ ಸೇರಿದ್ದ ಹಲವಾರು ಸ್ಥಳಗಳ ಮೇಲೆ 2017ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 1,500 ಕೋಟಿ ರೂಪಾಯಿ ಆದಾಯ ತೆರಿಗೆ ವಂಚನೆ ಪತ್ತೆಯಾಗಿತ್ತು. ಅಲ್ಲದೇ 7 ಕೋಟಿ ರೂಪಾಯಿ ನಗದು, 5 ಕೋಟಿ ಮೌಲ್ಯದ ಆಭರಣಗಳನ್ನು ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇದನ್ನೂ ಓದಿ: ಪರಪ್ಪನ ಅಗ್ರಹಾರದಿಂದ ಶಶಿಕಲಾ ಬಿಡುಗಡೆ ದಿನಾಂಕ ಫಿಕ್ಸ್
Advertisement
ಮುಂದಿನ ವರ್ಷದ ಜನವರಿಯಲ್ಲಿ ಶಶಿಕಲಾ ಜೈಲಿಂದ ರಿಲೀಸ್ ಆಗಲಿದ್ದಾರೆ. ಶಶಿಕಲಾ ಬಿಡುಗಡೆಯ ಕುರಿತು ನರಸಿಂಹ ಮೂರ್ತಿ ಅವರು ಸಲ್ಲಿಸಲಾಗಿದ್ದ ಆರ್‍ಟಿಐ ಅರ್ಜಿಗೆ ಜೈಲಾಧಿಕಾರಿಗಳು ಉತ್ತರ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯೊಂದಿಗೆ 10 ಕೋಟಿ ರೂ. ದಂಡ ವಿಧಿಸಿದೆ. ಈ ಮೊತ್ತವನ್ನು ಶಶಿಕಲಾ ಪಾವತಿ ಮಾಡಿದರೆ ಅವರ ಬಿಡುಗಡೆಗೆ ಅವಕಾಶವಿದೆ. ಇಲ್ಲವಾದರೆ ಮತ್ತೆ ಒಂದು ವರ್ಷ ಶಶಿಕಲಾ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಪೆರೋಲ್ ದಿನಗಳನ್ನು ಲೆಕ್ಕಾಚಾರ ಮಾಡಿದರೂ ಅವರ ಬಿಡುಗಡೆ ದಿನಾಂಕ ಬದಲಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಈ ಹಿಂದೆ ಲಭಿಸಿತ್ತು.