– ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಣೆ
ಚಿಕ್ಕಬಳ್ಳಾಪುರ: ಪಬ್ಲಿಕ್ ಟಿವಿ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಉಚಿತ ಟ್ಯಾಬ್ ವಿತರಣೆ ಮಾಡುತ್ತಿರುವ ಅಂಗವಾಗಿ ಇಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಸುಧಾಕರ್ ಟ್ಯಾಬ್ ವಿತರಣೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಇಂದು ಸಚಿವ ಸುಧಾಕರ್ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿದರು. ಇಂದು ಬಿಬಿ ರಸ್ತೆಯ ಪ್ರೌಢಶಾಲೆಯ 201 ಮಂದಿ ವಿದ್ಯಾರ್ಥಿಗಳಿಗೆ 102 ಟ್ಯಾಬ್ ವಿತರಿಸಲಾಯಿತು.
ಸಚಿವ ಸುಧಾಕರ್ ಪಬ್ಲಿಕ್ ಟಿವಿ ಸಮಾಜಮುಖಿ ಕಾರ್ಯಕ್ಕೆ ಕೈ ಜೋಡಿಸಿದ್ದು, ಇಡೀ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೂ ತಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಟ್ಯಾಬ್ ವಿತರಣೆ ಮಾಡುವುದಾಗಿ ತಿಳಿಸಿದರು. ಟ್ಯಾಬ್ ವಿತರಿಸಿ ಮಾತನಾಡಿದ ಅವರು, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್ ಆರ್ ರಂಗನಾಥ್ ಅವರ ಸಮಾಜಮುಖಿ ಕಾರ್ಯವನ್ನ ಕೊಂಡಾಡಿದರು. ಟ್ಯಾಬ್ ಪಡೆದ ವಿದ್ಯಾರ್ಥಿಗಳು, ಸಚಿವ ಸುಧಾಕರ್ ಹಾಗೂ ಪಬ್ಲಿಕ್ ಟಿವಿಗೆ ಧನ್ಯವಾದಗಳನ್ನ ಅರ್ಪಿಸಿದ್ದಾರೆ.