ಜ್ಞಾನ ದೀವಿಗೆಗೆ 4 ಲಕ್ಷ ರೂ. ನೀಡಿದ ರಾಮಲಿಂಗಾರೆಡ್ಡಿ

Public TV
1 Min Read
ramalingareddy

ಬೆಂಗಳೂರು: ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸರ್ಕಾರಿ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ‘ಜ್ಞಾನ ದೀವಿಗೆ’ ಕಾರ್ಯಕ್ರಮಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಹಲವು ಜನರು ಸಹಾಯಕ್ಕೆ ಧಾವಿಸುತ್ತಿದ್ದಾರೆ. ಅದೇ ರೀತಿ ಇದೀಗ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ 4 ಲಕ್ಷ ರೂ.ಗಳನ್ನು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದು,  ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಜ್ಞಾನ ದೀವಿಗೆ’ ಅಭಿಯಾನಕ್ಕೆ ಕೈ ಜೋಡಿಸುವ ಸಲುವಾಗಿ ಪಬ್ಲಿಕ್ ಟಿವಿಗೆ ಇಂದು 4 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿದೆ. ಸರ್ಕಾರಿ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ವೇಳೆ ಮಾಜಿ ಕಾರ್ಪೋರೇಟರ್ ಬಿ.ಮೋಹನ್ ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆಯ ಸಹೋಗದಲ್ಲಿ ನಡೆಯುತ್ತಿರುವ ಜ್ಞಾನ ದೀವಿಗೆ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸರ್ಕಾರಿ ಶಾಲೆಗಳ ಬಡ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಹಲವರು  ಟ್ಯಾಬ್ ಗಳ ಸಹಾಯ ಮಾಡುತ್ತಿದ್ದಾರೆ.

Share This Article