ಟಿ.ನರಸೀಪುರ ಕ್ಷೇತ್ರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಎಸ್‍ಟಿಎಸ್ ಪರಿಶೀಲನೆ

Public TV
1 Min Read
st someshkar

– ಔಷಧಿಗಳ ಕೊರತೆಯಾಗದಂತೆ ಎಚ್ಚರವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ

ಮೈಸೂರು: ಟಿ.ನರಸೀಪುರ ವಿಧಾನ ಸಭಾ ಕ್ಷೇತ್ರದ ಮಲಿಯೂರು, ಬನ್ನೂರು, ಕೂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

st somashekar

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಣೆಯಾಗಿದ್ದು, ಯಾವುದೇ ರೀತಿಯಲ್ಲೂ ಔಷಧಿಗಳು ರೋಗಿಗಳಿಗೆ ಕೊರತೆ ಉಂಟಾಗಬಾರದು. ಮೊದಲ ಡೋಸ್ ವ್ಯಾಕ್ಸಿನೇಷನ್ ಪಡೆದಿರುವವರು ನಿಗದಿತ ಅವಧಿಯಲ್ಲಿ 2ನೇ ಡೋಸ್ ಲಸಿಕೆಯನ್ನು ಪಡೆಯಬೇಕು. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಹರಡುತ್ತಿದ್ದು, ಈಗಿನಿಂದಲೇ ಇದರ ಬಗ್ಗೆ ಹೆಚ್ಚಿನ ಗಮನ ಕೊಡಿ. ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಮಾಡಿಸಿ. ಯಾರಿಗೆ ಆಸ್ಪತ್ರೆಯ ಅಗತ್ಯವಿದೆಯೋ ಅವರನ್ನು ಆಸ್ಪತ್ರೆಗೆ ಸೇರಿಸಿ ಎಂದರು.

ಜಿಲ್ಲೆಯಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ಕೋವಿಡ್ ಪರೀಕ್ಷೆ ಮಾಡಿಸಿ. ಜಿಲ್ಲೆಗೆ 47ಏಐ ಆಕ್ಸಿಜನ್ ಬರುತ್ತಿದ್ದು, ವ್ಯಾಕ್ಸಿನೇಷನ್ ಹಾಗೂ ಔಷಧಿಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಮಾರ್ಕೆಟ್ ಗಳಲ್ಲಿ ಹಾಗೂ ಬ್ಯಾಂಕ್‍ಗಳಲ್ಲಿ ಜನರು ಕೋವಿಡ್ ನಿಯಮಗಳನ್ನು ಪಾಲಿಸದೆ ಗುಂಪಾಗಿ ಸೇರುತ್ತಿರುವುದರಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಕೋವಿಡ್ ನಿಯಮಗಳನ್ನು ಪಾಲಿಸದೆ ಇರುವವರಿಗೆ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದರು.

st sommeshkar

ಶಾಸಕ ಅಶ್ವಿನ್ ಕುಮಾರ್ ಅವರು ಮಾತನಾಡಿ, ಕೋವಿಡ್ ಸಮಯದಲ್ಲಿ ಮನೆ ಮನೆಗೆ ತೆರಳಿ ಔಷಧಿ ಕಿಟ್ ಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಔಷಧಿಗಳನ್ನು ಕಳುಹಿಸಿಕೊಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಟಿ.ನರಸೀಪುರದ ತಹಶೀಲ್ದಾರ್ ನಾಗೇಶ್, ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಡಾ.ವಿಜಯ್ ಕುಮಾರ್, ಡಾ.ರಶ್ಮಿ, ಡಾ.ಯೋಗೀಶ್ ಸೇರಿದಂತೆ ಇತರರು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *