ದುಬೈ: ಆಸ್ಟ್ರೇಲಿಯಾದಲ್ಲಿ ಈ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ನಡೆಬೇಕಿದ್ದ ಟಿ20 ವಿಶ್ವಕಪ್ ಟೂರ್ನಿಯನ್ನು ಎರಡು ವರ್ಷಗಳವರೆಗೆ ಮುಂದೂಡುವ ಸಾಧ್ಯತೆ ಇದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮೂಲಗಳು ತಿಳಿಸಿವೆ.
ಐಸಿಸಿ ಉನ್ನತ ಸಭೆಯು ಮೇ 28ರಂದು ನಡೆಯಲಿದ್ದು, ಬಳಿಕ ಈ ಕುರಿತು ಅಧಿಕೃತ ಪ್ರಕಟಣೆ ನೀಡಲಾಗುವುದು. ಆದರೆ ಕೊರೊನಾ ವೈರಸ್ ಪರಿಸ್ಥಿತಿ ನಿಯಂತ್ರಣಕ್ಕೆ ಬರದೇ ಇದ್ದರೆ ಮಾತ್ರ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ದಾದಾ ಕೈ ತಪ್ಪಿದ ಐಸಿಸಿ ಅಧ್ಯಕ್ಷ ಪಟ್ಟ
Advertisement
Advertisement
ಟಿ20 ವಿಶ್ವಕಪ್ ಟೂರ್ನಿಯನ್ನು ಮುಂದೂಡಿದರೆ ಬಿಸಿಸಿಐ ಸೆಪ್ಟೆಂಬರ್-ಅಕ್ಟೋಬರ್ ಅಥವಾ ಅಕ್ಟೋಬರ್-ನವೆಂಬರ್ ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‍ನ 13ನೇ ಆವೃತ್ತಿ ಆಯೋಜಿಸಲು ಸಾಧ್ಯವಾಗುತ್ತದೆ. ಈ ಹಿಂದೆ ಐಪಿಎಲ್ ಮಾರ್ಚ್ 29ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್-19 ಏಕಾಏಕಿ ಹರಡಿದ ಪರಿಣಾಮ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
Advertisement
2021ರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಸುವ ಬಗ್ಗೆ ಐಸಿಸಿ ಚರ್ಚೆ ನಡೆಸಲಿದೆ. ಆದರೆ 2021ರ ಈಗಾಗಲೇ ವೇಳಾಪಟ್ಟಿ ಸಿದ್ಧವಾಗಿರುವುದರಿಂದ ಐಸಿಸಿಗೆ 2022ರಲ್ಲಿ ಟೂರ್ನಿಯನ್ನು ನಡೆಸುವುದನ್ನು ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲ ಎಂದು ಹೇಳಲಾಗುತ್ತಿದೆ.
Advertisement
ICC has not taken a decision to postpone the T20 World Cup and preparations are ongoing for the event in Australia this year, as per plan. The topic is on the agenda for ICC Board meeting tomorrow and a decision will be made in due course: ICC spokesperson https://t.co/y8ReAQdrQL
— ANI (@ANI) May 27, 2020
ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಸಿಸಿ ವಕ್ತಾರರು, ಟಿ20 ವಿಶ್ವಕಪ್ ಟೂರ್ನಿ ಮುಂದೂಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಗುರುವಾರ ನಡೆಯಲಿರುವ ಉನ್ನತ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.