ಟೋಕಿಯೋ ಒಲಿಂಪಿಕ್ಸ್ ಹಾಕಿ ಕೋಚ್ ಅಂಕಿತಾರನ್ನು ಸನ್ಮಾನಿಸಿದ ಬೊಮ್ಮಾಯಿ

Public TV
1 Min Read
bommai 4

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕು. ಅಂಕಿತಾ ಸುರೇಶ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದ್ದಾರೆ.

ankkitha kodagu

ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದ್ದು, ತಂಡದ ತರಬೇತಿದಾರರಿಗೆ ತುಂಬು ಹೃದಯದ ಧನ್ಯವಾದಗಳು. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಬೊಮ್ಮಾಯಿ, ಅಂಕಿತಾ ಅವರಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಹಾಕಿಯಲ್ಲಿ ಸಾಧನೆ – ಕೊಡಗಿನಲ್ಲಿ ಅಂಕಿತಾ ಸುರೇಶ್‍ಗೆ ಅದ್ಧೂರಿ ಸ್ವಾಗತ

ಅಂಕಿತಾ ಅವರು ಮಡಿಕೇರಿ ಮೂಲದವರಾಗಿದ್ದು, ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ. ಪ್ರಥಮ ಬಾರಿಗೆ ಒಲಂಪಿಕ್ಸ್ ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತೇರ್ಗಡೆಗೊಂಡು ಅಮೋಘ ಸಾಧನೆ ಮಾಡಿದ್ದು ಅವರಿಗೆ ಹಾಗೂ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಸಿಎಂ ಸಂತಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *