ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ(61) ಕೊನೆಯುಸಿರೆಳೆದಿದ್ದಾರೆ.
ಕಳೆದ ಹತ್ತು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
Advertisement
ಪತ್ರಿಕೆಗಳಿಗೆ ವಿಜ್ಞಾನ ಬರಹಗಾರರಾಗಿದ್ದ ಇವರು ಹಲವು ಬಾರಿ ಪಬ್ಲಿಕ್ ಟಿವಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೆದುಳು ನಿಷ್ಕ್ರಿಯಗೊಂಡು ಹಾಲ್ದೊಡ್ಡೇರಿ ಮೃತಪಟ್ಟಿರುವುದರಿಂದ ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಇದರಂತೆ ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ.
Advertisement
ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಇಂದು ಪ್ರಕಟಗೊಂಡಿತ್ತು. ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪ್ರಶಸ್ತಿಗೆ ಸುಧೀಂದ್ರ ಹಾಲ್ದೊಡ್ಡೇರಿ ಅವರನ್ನು ಆಯ್ಕೆ ಮಾಡಲಾಗಿತ್ತು. ಇದನ್ನೂ ಓದಿ: ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪ್ರಶಸ್ತಿಗೆ ಸುಧೀಂದ್ರ ಹಾಲ್ದೊಡ್ಡೇರಿ ಆಯ್ಕೆ