ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಯಾವಾಗಲೂ ಗೂಂಡಾ ರಾಜಕಾರಣ. ಆರ್.ಆರ್ ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದೆ ಶೋಭ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೇ ಸಂಸದರು. ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮಕ್ಕೆ ಅವಕಾಶ ಕೊಡಬಾರದು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಕಾಂಗ್ರೆಸ್‍ನವರು ಎಲ್ಲ ಸಂದರ್ಭದಲ್ಲೂ ಗುದ್ದಾಟ ಮಾಡುತ್ತಾರೆ. ಈಗ ಪಕ್ಷದ ಅಸ್ತಿತ್ವಕ್ಕಾಗಿ ಗುದ್ದಾಟ ನಡೆಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗಲು, ಇಲ್ಲದಿರುವಾಗಲು ಕಾಂಗ್ರೆಸ್‍ನವರು ಗುದ್ದಾಟ ನಡೆಸುತ್ತಾರೆ. ಇದು ಕಾಂಗ್ರೆಸ್ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ. ಹೀಗಾಗಿ ಅವರ ಗುದ್ದಾಟ ಬಿಜೆಪಿಗೆ ಏನು ಏಫೆಕ್ಟ್ ಆಗಲ್ಲ ಎಂದು ಹೇಳಿದರು.
Advertisement
ಕೊರೊನಾ ಲಸಿಕೆ ಉಚಿತ ನೀಡುವ ಚುನಾವಣಾ ಪ್ರಣಾಳಿಕೆ ಕುರಿತು ಮಾತನಾಡಿದ ಅವರು, ನಮ್ಮದೇ ಸರ್ಕಾರ ಇದೆ. ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದು ನಮ್ಮ ಗುರಿ. ಇದಕ್ಕಾಗಿ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಹೀಗಾಗಿಯೇ ಉಚಿತವಾಗಿ ಕೊಡುತ್ತೇವೆ ಎನ್ನುವುದರಲ್ಲಿ ತಪ್ಪಿಲ್ಲ. ಆದಷ್ಟು ಬೇಗ ರಾಜ್ಯದ ಜನರಿಗೆ ಕೊರೊನಾ ಲಸಿಕೆ ಸಿಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ವಿಶ್ವಾಸ ಭರವಸೆ ವ್ಯಕ್ತಪಡಿಸಿದ್ದಾರೆ.