ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ಗಳ ಪರೀಕ್ಷೆ ಗಳನ್ನು ಕೋವಿಡ್ ಕಾರಣಕ್ಕೆ ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
Advertisement
ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು ಅದನ್ನು ವಾಪಸ್ ಕೊಡಿಸಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಡಿಸಿಎಂ, ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕ ದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ಹೇಳಿದ್ದಾರೆ.
Advertisement
Advertisement
ಈ ಸಂಬಂಧ ಸುತ್ತೋಲೆಯನ್ನು ಎಲ್ಲ ವಿಶ್ವವಿದ್ಯಾಲಯಗಳಿಗೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಉಪಮುಖ್ಯಮಂತ್ರಿಗಳು ಸೂಚಿಸಿದ್ದಾರೆ.