ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆರೋಪಿಯಗಿರುವ ಮಾಜಿ ಮೇಯರ್ ಸಂಪತ್ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪರಾರಿ ಆಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಗಿದೆ.
Advertisement
ಕೊರೊನಾ ಸೋಂಕು ತಗುಲಿದೆ ಎಂದು ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಸಂಪತ್ ರಾಜ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡೋ ಭಯದಲ್ಲಿ ಸಿನಿಮಾ ಶೈಲಿಯಲ್ಲಿ ರಾತ್ರೋರಾತ್ರಿ ಪರಾರಿಯಾಗಿದ್ದು, ಗುರುವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಸಿಬಿ ತಂಡಕ್ಕೆ ಶಾಕ್ ಆಗಿದೆ. ಬುಧವಾರ ಮಧ್ಯರಾತ್ರಿಯೇ ಡಿಸ್ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸೋದರಳಿಯನ್ನ ಬಿಟ್ಟು ಆಟ ಆಡಲು ಹೋಗಿ ತಗ್ಲಾಕೊಂಡ್ರಾ ಕಾರ್ಪೋರೇಟರ್ ಸಂಪತ್ರಾಜ್?
Advertisement
Advertisement
ಸಂಪತ್ ರಾಜ್ ಡಿಸ್ಚಾರ್ಜ್ ಮಾಡುವಾಗ ಸಿಸಿಬಿ ಅಧಿಕಾರಿಗಳ ಗಮನಕ್ಕೆ ತರುವಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಗಮನಕ್ಕೆ ತರದೇ ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್ ಆಗಿದ್ದು, ಪರಾರಿಯಾಗಿದ್ದಾರೆ. ಕಾಕ್ಸ್ ಟೌನ್ ನಲ್ಲಿರುವ ಸಂಪತ್ ರಾಜ್ ಮನೆ ಸಹ ಬೀಗ ಹಾಕಿದ್ದು, ಸಿಸಿಬಿ ತಂಡ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿದೆ. ಅಲ್ಲದೆ ಡಿಸ್ಚಾರ್ಜ್ ಮಾಡಿದ್ದರ ಕುರಿತು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ಗಳಿಗೆ ನೋಟಿಸ್
Advertisement
ಸಂಪತ್ ರಾಜ್ ಕೇರಳ ಕಡೆ ಪರಾರಿಯಾಗಿರುವ ಶಂಕೆ ಹಿನ್ನಲೆ ಸಿಸಿಬಿ ತಂಡ ಹುಡುಕಾಟ ನಡೆಸಿದೆ. ನಾಳೆ ವಿಚಾರಣೆಗೆ ಹಾಜರಾಗಲು ಬ್ಯಾಪಿಸ್ಟ್ ಆಸ್ಪತ್ರೆಯ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ ಆಸ್ಪತ್ರೆಗೆ ಭೇಟಿ ನೀಡಿ ಸಿಸಿಬಿ ತಂಡ ಪರಿಶೀಲನೆ ನಡೆಸಿದ್ದು, ಈ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಸಂಪತ್ ರಾಜ್ ಮೆಡಿಕಲ್ ರಿಪೋರ್ಟ್ ನೋಡಿ ಸಿಸಿಬಿ ಅಧಿಕಾರಿಗಳು ದಂಗಾಗಿದ್ದಾರೆ. ಸೆಪ್ಟೆಂಬರ್ 14 ರಂದು ಅಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್, ಒಂದೇ ತಿಂಗಳಲ್ಲಿ 4 ಬಾರಿ ಅಡ್ಮಿಟ್, 4 ಬಾರಿ ಡಿಸ್ಚಾರ್ಜ್ ಆಗಿದ್ದಾರೆ. ಈಗ ಮೆಡಿಕಲ್ ರಿಪೋರ್ಟ್ ಸೀಜ್ ಮಾಡಿ ಸಿಸಿಬಿ ತಂಡ ಪರಿಶೀಲನೆ ನಡೆಸಿದೆ. ಸಂಪತ್ ರಾಜ್ಗೆ ಚಿಕಿತ್ಸೆ ನೀಡಿದ ವೈದ್ಯರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
sಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ 50 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸಿದ್ದು, ಮಾಜಿ ಮೇಯರ್ ಸಂಪತ್ ರಾಜ್ 51ನೇ ಆರೋಪಿಯಾಗಿದ್ದರೆ, ಮಾಜಿ ಪಾಲಿಕೆ ಸದಸ್ಯ ಝಾಕೀರ್ 52ನೇ ಆರೋಪಿಯಾಗಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಬೆಂಕಿ ಇಡಲು ಇವರ ಪಾತ್ರ ಇದೆ. ಟೆಕ್ನಿಕಲ್ ಸಾಕ್ಷ್ಯಗಳ ಮೂಲಕ ಗಲಭೆಯಲ್ಲಿ ಭಾಗಿಯಾದ ಮತ್ತಷ್ಟು ಆರೋಪಿಗಳ ಹೆಸರನ್ನು ಸೇರಿಸಲಾಗುವುದು ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ.
ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ವಿಚಾರಣೆಗೆ ಬರುವಂತೆ ಎರಡನೇ ಬಾರಿ ನೋಟಿಸ್ ನೀಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಸಂಪತ್ ರಾಜ್ ಅವರಿಗೆ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂಬ ಅಂಶ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿತ್ತು.