ಬೆಂಗಳೂರು: ಮಹಾಮಾರಿ ಕೋವಿಡ್‍ನಿಂದ ಜೀವ ಕಾಪಾಡುವ ಲಸಿಕೆಯ ಬಗ್ಗೆ ನಡೆಯುತ್ತಿರುವ ರಾಜಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
Advertisement
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಬುಧವಾರ ಅಡ್ವೊಕೇಟ್ಸ್ ಫಾರ್ ‘ಗ್ರೀನ್ ಅರ್ಥ್’ ಸ್ವಯಂ ಸೇವಾ ಸಂಸ್ಥೆಯು ಬಿಬಿಎಂಪಿ ಜತೆ ಸೇರಿ ವಕೀಲರಿಗೆ ಆಯೋಜಿಸಿದ್ದ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಡಿಸಿಎಂ, ಕೋವಿಡ್ ಮಾರಿಯನ್ನು ನಮ್ಮ ಹತ್ತಿರಕ್ಕೆ ಬರದಂತೆ ತಡೆಯಲು ಇರುವ ಏಕೈಕ ಪರಿಹಾರ ಲಸಿಕೆ ಮಾತ್ರ. ಆದರೆ, ಇದರ ಬಗ್ಗೆ ನಡೆಯುತ್ತಿರುವ ರಾಜಕೀಯ ಅಷ್ಟಿಷ್ಟಲ್ಲ. ಜಾಗತಿಕವಾಗಿ ನಡೆದ ಷಡ್ಯಂತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪರಿಣಾಮಕಾರಿಯಾಗಿ ಎದುರಿಸಿದರು. ಅದೇ ರೀತಿ ನಮ್ಮ ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ತಂತ್ರಗಳಿಗೆ ರಾಜ್ಯ ಸರ್ಕಾರ ತಿರುಗೇಟು ಕೊಟ್ಟಿದೆ ಎಂದರು.
Advertisement
Inaugurated a special #VaccinationDrive for advocates & their family members held by 'Advocates for Green Earth' in association with BBMP at Kanteerava stadium.
Shri @PCMohanMP, @VivekSReddy9 were also present. Kudos to the team for joining hands with our Govt! pic.twitter.com/q4Ic2l3rrV
— Dr. Ashwathnarayan C. N. (@drashwathcn) June 16, 2021
Advertisement
ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಲಸಿಕೆಯ ಸಂಶೋಧನೆ, ತಯಾರಿಕೆ ಮತ್ತು ಲಸಿಕೀಕರಣ ಅತ್ಯಂತ ವೇಗವಾಗಿ ಆಗಿದೆ. ಇದನ್ನು ಪ್ರತಿಯೊಬ್ಬರೂ ಗುರುತಿಸಬೇಕು. ಈಗ ಪ್ರತಿಯೊಬ್ಬರೂ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಜತೆಗೆ, ಕುಟುಂಬದವರಿಗೂ ಕೊಡಿಸಬೇಕು ಹಾಗೂ ನಮ್ಮ ಸುತ್ತಮುತ್ತಲಿನ ಜನರು ಪಡೆಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಡಿಸಿಎಂ ಹೇಳಿದರು.
Advertisement