ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಟಿ-20 ಮಾದರಿಯ ಕ್ರಿಕೆಟಿನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.
ಸೋಮವಾರ ಡೆಲ್ಲಿ ಕ್ಯಾಪಿಟಲ್ ಮತ್ತು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಸೋತರೂ ಈ ಪಂದ್ಯದಲ್ಲಿ 43 ರನ್ ಗಳಿಸಿದ ವಿರಾಟ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಟಿ-20ಯಲ್ಲಿ 9 ಸಾವಿರ ರನ್ ಪೂರೈಸಿದ ಮೊದಲ ಭಾರತದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Advertisement
Advertisement
ಸೋಮವಾರ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಒಂದು ಸಿಕ್ಸರ್ ಮತ್ತು ಎರಡು ಬೌಂಡರಿ ಸಮೇತ 39 ಎಸೆತದಲ್ಲಿ 43 ರನ್ ಸಿಡಿಸಿದ್ದರು. ಈ ಪಂದ್ಯದಲ್ಲಿ 10 ರನ್ ಪೂರ್ಣ ಗೊಳಿಸಿದಾಗಲೇ 9 ಸಾವಿರದ ಮೈಲುಗಲ್ಲನ್ನು ದಾಟಿದರು. ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟಿನಲ್ಲಿ ಒಟ್ಟು 285 ಟಿ-20 ಪಂದ್ಯಗಳನ್ನು ಆಡಿದ್ದು, 271 ಇನ್ನಿಂಗ್ಸ್ ಗಳಲ್ಲಿ 9 ಸಾವಿರ ರನ್ ಪೂರ್ಣಗೊಳಿಸಿದ್ದಾರೆ.
Advertisement
Advertisement
ಕೊಹ್ಲಿಯವರನ್ನು ಬಿಟ್ಟರೆ ಇಂಡಿಯನ್ ಪ್ಲೇಯರ್ಸ್ ಗಳಲ್ಲಿ, ಭಾರತದ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮಾ ಅವರು 8,818 ರನ್‍ಗಳಿಸಿ ಎರಡನೇ ಸ್ಥಾನ ಮತ್ತು ಭಾರತದ ಮಾಜಿ ಆಟಗಾರ ಸುರೇಶ್ ರೈನಾ ಅವರು 8,392 ರನ್ ಸಿಡಿಸಿ ಮೂರನೇ ಸ್ಥಾನದಲ್ಲಿ ಇದ್ದಾರೆ. 271 ಇನ್ನಿಂಗ್ಸ್ ಗಳಲ್ಲಿ 9 ಸಾವಿರ ರನ್ ಪೂರ್ಣಗೊಳಿಸಿದ ಕೊಹ್ಲಿ ಅತಿ ವೇಗದಲ್ಲಿ 9 ಸಾವಿರ ರನ್ ಗಳಿಸಿದ ಎರಡನೇ ಆಟಗಾರನಾಗಿದ್ದಾರೆ. ಇವರಿಗೂ ಮುಂಚೆ ಕ್ರಿಸ್ ಗೇಲ್ ಅವರು ಕೇವಲ 252 ಇನ್ನಿಂಗ್ಸ್ ನಲ್ಲಿ 9 ಸಾವಿರ ರನ್ ಪೂರ್ಣಗೊಳಿಸಿ ಮೊದಲ ಸ್ಥಾನದಲ್ಲಿ ಇದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ 404 ಟಿ-20 ಪಂದ್ಯಗಳನ್ನಾಡಿ 13,296 ರನ್ ಗಳಿಸಿರುವ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಅವರು ಟಿ-20ಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಇವರ ನಂತರ 517 ಪಂದ್ಯಗಳಲ್ಲಿ 10,370 ರನ್ ಗಳಿಸಿದ ಕಿರನ್ ಪೊಲಾರ್ಡ್ ಅವರು ಎರಡನೇ ಸ್ಥಾನದಲ್ಲಿ ಇದ್ದಾರೆ. ಮೂರನೇ ಸ್ಥಾನದಲ್ಲಿ ಪಾಕಿಸ್ತಾನದ ಶೋಯೆಬ್ ಮಲಿಕ್ ಅವರ ಇದ್ದು, ಇವರು 392 ಪಂದ್ಯಗಳಲ್ಲಿ 9,926 ಗಳಿಸಿದ್ದಾರೆ. ಕೊಹ್ಲಿ ಈ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿ ಇದ್ದಾರೆ.
ಈಗಾಗಲೇ ವಿರಾಟ್ ಕೊಹ್ಲಿಯವರು ಐಪಿಎಲ್‍ನಲ್ಲಿ 5 ಸಾವಿರದ ಗಡಿ ದಾಟಿದ್ದು, 5,412 ರನ್ ಗಳಿಸಿ ಪ್ರಥಮ ಸ್ಥಾನದಲ್ಲಿ ಇದ್ದಾರೆ. ಅಂತಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ 80 ಟಿ-20 ಪಂದ್ಯಗಳನ್ನು ಆಡಿರುವ ಕೊಹ್ಲಿ 50.80 ಸರಾಸರಿಲ್ಲಿ 2,794 ರನ್ ಸಿಡಿಸಿ ಮೊದಲ ಸ್ಥಾನದಲ್ಲಿ ಇದ್ದಾರೆ. ಇವರ ನಂತರ 108 ಪಂದ್ಯಗಳನ್ನಾಡಿ 2,773 ರನ್ ಸಿಡಿಸಿರುವ ರೋಹಿತ್ ಶರ್ಮಾ ಅವರು ಎರಡನೇ ಸ್ಥಾನದಲ್ಲಿ ಇದ್ದಾರೆ.