ಹೈದರಾಬಾದ್: ಬಹುಭಾಷಾ ನಟ ಪ್ರಕಾಶ್ ರೈ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕಾಶ್ ರೈ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Advertisement
ಕಾಲಿವುಡ್ ನಟ ಧನುಷ್ ಅಭಿನಯದ ‘ಡಿ44’ ಚಿತ್ರ ಇತ್ತೀಚೆಗಷ್ಟೇ ಆಗಸ್ಟ್ 5 ರಂದು ಸೆಟ್ಟೇರಿದ್ದು, ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಪ್ರಕಾಶ್ ರೈ ಅಭಿನಯಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದು, ಶೂಟಿಂಗ್ ವೇಳೆ ಆಗಸ್ಟ್ 10ರಂದು ಪ್ರಕಾಶ್ ರೈ ಕೆಳಗೆ ಬಿದ್ದು ಗಾಯಗೊಂಡಿದ್ದರು. ಹೀಗಾಗಿ ತಕ್ಷಣ ಅವರನ್ನು ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ಗೆ ಕರೆದೊಯ್ಯಲಾಗಿಯತ್ತು. ಇನ್ನೂ ಈ ವಿಚಾರ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಕೂಡ ಶುರುವಾಗಿತ್ತು.
Advertisement
Advertisement
ಸದ್ಯ ಇದೀಗ ಪ್ರಕಾಶ್ ರೈ ಆಸ್ಪತ್ರೆಯಲ್ಲಿರುವ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ತಾವು ಕ್ಷೇಮವಾಗಿರುವುದಾಗಿ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ಪ್ರಕಾಶ್ ರಾಜ್ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಫೋಟೋದಲ್ಲಿ ಪ್ರಕಾಶ್ ರೈ ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಬೆಡ್ ಮೇಲೆ ಮಲಗಿ ಕಿರುನಗೆ ಬೀರುತ್ತಾ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಫೋಟೋದಲ್ಲಿ ಪ್ರಕಾಶ್ ರೈ ಕೈಗೆ ಸರ್ಜರಿಯಾಗಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಡೆವಿಲ್ ಇಸ್ ಬ್ಯಾಕ್, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ನನ್ನ ಆತ್ಮೀಯ ಗೆಳೆಯ ಡಾ.ಗುರುವರೆಡ್ಡಿ ಮತ್ತು ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಗೆ ಧನ್ಯವಾದಗಳು. ಶೀಘ್ರವೇ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ.
Advertisement
The ???? devil is back… successful surgery.. thank you dear friend Dr #guruvareddy and ???????????? thank you all for your love n prayers.. back in action soon ???????? pic.twitter.com/j2eBfemQPn
— Prakash Raj (@prakashraaj) August 11, 2021
ಧನುಷ್ ಅಭಿನಯದ ‘ಡಿ44’ ಚಿತ್ರಕ್ಕೆ ಮಿಥುನ್ ಆರ್ ಜವಾಹರ್ ಆ್ಯಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ಪ್ರಕಾಶ್ ರೈ, ನಿತ್ಯಾ ಮೆನನ್, ರಾಶಿ ಖನ್ನಾ, ಪ್ರಿಯಾ ಭವಾನಿ ಶಂಕರ್ ಸೇರಿದಂತೆ ಹಲವಾರು ತಾರಾಬಳಗವೇ ಈ ಚಿತ್ರದಲ್ಲಿದೆ. ಇದನ್ನೂ ಓದಿ:ಸಿನೆಮಾ ಥಿಯೇಟರ್ಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಸಿಎಂಗೆ ಮನವಿ