ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ ರಾಗಿಣಿ ಬೆನ್ನಲ್ಲೇ ಈಗ ನಟಿ ಸಂಜನಾ ಜೈಲುಪಾಲಾಗಿದ್ದಾರೆ. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ ಎರಡನೇ ನಟಿ ಎಂಬ ಕುಖ್ಯಾತಿಗೆ ಸಂಜನಾ ಪಾತ್ರವಾಗಿದ್ದಾರೆ.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾ ಜೊತೆ ವೀರೇನ್ ಖನ್ನಾ, ರವಿಶಂಕರ್ ಅವರನ್ನು 1ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ವೀರೇನ್ ಖನ್ನಾ, ರವಿಶಂಕರ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದರೆ ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನ ವಿಧಿಸಿತು. ಸಂಜನಾ ಪ್ರಕರಣವನ್ನು ವಿಶೇಷ ಕೋರ್ಟ್ಗೆ ವರ್ಗಾಯಿಸಿದ ಜೆಡ್ಜ್ ಸೆ.18ರಂದು ಕೋರ್ಟ್ಗೆ ಹಾಜರುಪಡಿಸಬೇಕೆಂದು ಸೂಚಿಸಿದರು.
Advertisement
ಸಾಂತ್ವನ ಕೇಂದ್ರದಲ್ಲಿದ್ದ ಸಂಜನಾರನ್ನು ಬೆಳಗ್ಗೆ ಕೆಸಿ ಜನರಲ್ ಆಸ್ಪತ್ರಗೆ ಕರೆತಂದು ವೈದ್ಯಕೀಯ ಪರೀಕ್ಷೆ, ಕೊರೊನಾ ಟೆಸ್ಟ್ ನಡೆಸಲಾಯಿತು. ಬಳಿಕ ಸಾಂತ್ವನ ಕೇಂದ್ರಕ್ಕೆ ಕರೆತಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಇಂದಿನ ವಿಚಾರಣೆ ವೇಳೆ ಸಿಸಿಬಿ ಪೊಲೀಸರು ಕಸ್ಟಡಿಗೆ ನೀಡುವಂತೆ ಕೇಳಿರಲಿಲ್ಲ. ಹೀಗಾಗಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತು.
Advertisement
Advertisement
ಸೋಮವಾರ ನಟಿ ರಾಗಿಣಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಈ ವೇಳೆ ಸಿಸಿಬಿ ಪೊಲೀಸರು ಸಂಜನಾರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಿದ್ದರು. ಆದರೆ ಕೋರ್ಟ್ 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿತ್ತು.
Advertisement
ರಾಗಿಣಿ ಸೇರಿದಂತೆ ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ.
ಯಾವ ಸೆಕ್ಷನ್ ಏನು ಹೇಳುತ್ತದೆ?
ಎನ್ಡಿಪಿಎಸ್ 21 – ಮಾದಕ ವಸ್ತುಗಳನ್ನು ಅಕ್ರಮವಾಗಿ ತಯಾರು ಮಾಡುವುದು, ಮಾರಾಟ ಮಾಡುವುದು, ಸಾಗಾಟ ಮಾಡುವುದು ಅಪರಾಧ.
ಎನ್ಡಿಪಿಎಸ್ 21ಸಿ – ವಾಣಿಜ್ಯ ಉದ್ದೇಶಕ್ಕಾಗಿ ಮಾದಕವಸ್ತುಗಳ ಸಂಗ್ರಹಣೆ ಮತ್ತು ಮಾರಾಟ ಮಾಡುವುದು ನಿಷಿದ್ಧ. ಆರೋಪ ಸಾಬೀತಾದರೆ 10 ವರ್ಷಕ್ಕೆ ಮೇಲ್ಪಟ್ಟು ಶಿಕ್ಷೆ
ಎನ್ಡಿಪಿಎಸ್ 27 ಎ – ಮಾದಕ ವಸ್ತುಗಳಿಗೆ ಸಂಬಂಧಿಸಿ ಹಣಕಾಸು ನೆರವು. ನೇರವಾಗಿ ಅಥವಾ ಪರೋಕ್ಷವಾಗಿ ಅಥವಾ ಮಾದಕ ವಸ್ತು ಸಾಗಣಿಕೆಗೆ ನೆರವಾಗುವುದು ಅಪರಾಧ.
ಎನ್ಡಿಪಿಎಸ್ 27 ಬಿ – ಮಾದಕವಸ್ತು ಸೇವನೆ ಕೂಡ ಅಪರಾಧ. ಆರು ತಿಂಗಳ ಶಿಕ್ಷೆ ಅಥವಾ 10 ಸಾವಿರ ದಂಡ.
ಎನ್ಡಿಪಿಎಸ್ 29 – ಅಪರಾಧಿಕ ಒಳ ಸಂಚಿಗೆ ಸಹಾಯ ಮಾಡುವುದು. ಅಂತೆಯೇ ಒಳ ಸಂಚು ಮಾಡಲು ವೇದಿಕೆ ಕಲ್ಪಿಸುವುದು ಪಾರ್ಟಿ ಆಯೋಜನೆ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ.
ಐಪಿಸಿ 120 ಬಿ – ಅಪರಾಧಿಕ ಒಳಸಂಚು.