ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಶನಿವಾರ ಭಾರತಿ ಸಿಂಗ್ ನಿವಾಸ ಮತ್ತು ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿ ದಂಪತಿಯನ್ನು ಬಂಧಿಸಿದ್ದರು. ಭಾನುವಾರ ಇಬ್ಬರನ್ನ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಇದೇ ವೇಳೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಮತ್ತಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ದಂಪತಿಗೆ ಡಿಸೆಂಬರ್ 4ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಭಾರತಿ ಕಲ್ಯಾಣದ ಜೈಲಿಗೂ ಮತ್ತು ಹರ್ಷ್ ಟಲೇಜಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದಾದ ಬಳಿಕ ದಂಪತಿ ಕಿಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಕಿಲಾ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ಅರ್ಜಿ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ದಂಪತಿಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಶನಿವಾರ ಬೆಳಗ್ಗೆ ಭಾರತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿತಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆ ವಿಚಾರಣೆಗಾಗಿ ದಂಪತಿಯನ್ನ ಎನ್‍ಸಿಬಿ ಕಚೇರಿಗೆ ಕರೆತರಲಾಗಿತ್ತು. 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿತ್ತು.
ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ 21 ವರ್ಷದ ಯುವಕನ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಲಾಗಿತ್ತು. ಯುವಕನಿಂದ 40 ಗ್ರಾಂ ಗಾಂಜಾ ಮತ್ತು ಇನ್ನಿತರ ನಶೆ ಪದಾರ್ಥಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದೇ ಯುವಕ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಹೇಳಿದ್ದ. ಯುವಕನ ಹೇಳಿಕೆಯನ್ನಾಧರಿಸಿ ಅಧಿಕಾರಿಗಳು ಭಾರತಿ ನಿಒವಾಸದ ಮೇಲೆ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.