ಚಾಮರಾಜನಗರ: ಡ್ರಗ್ ದಂಧೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಇದನ್ನೂ ಓದಿ: ನಾನು ಅಲ್ಪಸಂಖ್ಯಾತನಾಗಿದ್ದೇನೆ, ನನ್ನನ್ನು ತುಳಿಯಲು ನೋಡಲಾಗುತ್ತಿದೆ – ಜಮೀರ್
ಶಾಸಕ ಜಮೀರ್ ಮೇಲೆ ಡ್ರಗ್ಸ್ ಮಾಫಿಯಾ ಆರೋಪ ಕೇಳಿ ಬರುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಕುಮಾರ್, ಡ್ರಗ್ಸ್ ದಂಧೆ ವಿಚಾರದಲ್ಲಿ ರಾಜಕೀಯ ಸಲ್ಲದು. ಡ್ರಗ್ಸ್ ಪಿಡುಗಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇಡೀ ಯುವ ಜನಾಂಗವನ್ನೇ ನಾಶ ಮಾಡುವ ದಂಧೆ. ಪಕ್ಷಗಳು, ರಾಜಕೀಯ ಮೀರಿ ನಾವೆಲ್ಲರೂ ಕೈ ಜೋಡಿಸಬೇಕಿದೆ. ಒಟ್ಟಾಗಿ ಎದುರಿಸದಿದ್ದರೆ ಭಸ್ಮಾಸುರನಾಗಿ ಎಲ್ಲರನ್ನೂ ಸುಡಲಿದೆ ಎಂದರು.
Advertisement
Advertisement
ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಹೀಗಾಗಿ ತುರ್ತಾಗಿ ಹಣ ಬಿಡುಗಡೆ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಸುರೇಶ್ ಕುಮಾರ್ ಎಂದು ಹೇಳಿದರು. ಇದನ್ನೂ ಓದಿ: ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ: ಪ್ರಶಾಂತ್ ಸಂಬರಗಿ
Advertisement
ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕುವ ವಿಚಾರದಲ್ಲಿ ಸಿದ್ದರಾಮಯ್ಯಗೆ ನಾನು ಸಂಪೂರ್ಣ ವಿಶ್ವಾಸ ಕೊಡುತ್ತೇನೆ. ಸರ್ಕಾರ ಬಹಳ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದರು. ಇನ್ನೂ ಕಾಂಗ್ರೆಸ್ ಅವರು ಉದ್ಯೋಗ ನೀಡಿ ಎಂಬ ಅಭಿಯಾನ ಕುರಿತ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಕುಮಾರ್, ಅವರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ, ಕಷ್ಟವಿದೆ ಎಂದು ವ್ಯಂಗ್ಯ ಮಾಡಿದರು.
Advertisement
ಡ್ರಗ್ಸ್ ಪ್ರಕರಣದಲ್ಲಿ ತನ್ನ ವಿರುದ್ಧ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಜಮೀರ್, ನನ್ನ ಮೇಲೆ ಬರುತ್ತಿರುವ ಆರೋಪ ರಾಜಕೀಯ ಪ್ರೇರಿತ. ಫಾಜಿಲ್ ನಾಲ್ಕು ವರ್ಷದ ಹಿಂದೆ ಪರಿಚಯವಾಗಿದ್ದ. ಆದರೆ ಈಗ ನಾನು ಆತನ ಸಂಪರ್ಕದಲ್ಲಿ ಇಲ್ಲ. ಯಾರೋ ಬರುತ್ತಿರುತ್ತಾರೋ ಅವರೆಲ್ಲಾ ಆಪ್ತರು ಅಂತಾ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು.
ಈಗ ಇಲ್ಲಿ ಸರ್ಕಾರ ಯಾವುದಿದೆ? ಕಾಂಗ್ರೆಸ್ ಸರ್ಕಾರ ಇದೆಯಾ? ಬಿಜೆಪಿ ಸರ್ಕಾರ ಇದ್ಯಾ? ಸಂಜನಾ ಎಲ್ಲಿದ್ದಾರೆ? ಪೊಲೀಸ್ ಕಸ್ಟಡಿಯಲ್ಲಿದ್ದಾರೆ ತಾನೇ. ತನಿಖೆ ಮಾಡಲಿ. ನಾನು ಪ್ರಕರಣದಲ್ಲಿ ಇದ್ದದ್ದು ಸಾಬೀತಾದರೆ ರಾಜ್ಯದಲ್ಲಿರುವ ನನ್ನ ಆಸ್ತಿ ಸರ್ಕಾರ ಕ್ಕೆ ಕೊಟ್ಟು ಬಿಡುತ್ತೇನೆ. ಸಂಜನಾರನ್ನ ನಾನು ಶ್ರೀಲಂಕಾ ಯಾಕೆ ಇಲ್ಲೇ ನೋಡಿಲ್ಲ ಎಂದು ತಿಳಿಸಿದ್ದರು.