ಕಲಬುರಗಿ: ಜಲ ಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಬಲಿಯಾಗಿದ್ದು, ಓರ್ವ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಕಲಬುರಗಿ ನಗರದ ಕೈಲಾಸ ನಗರ ಬಡಾವಣೆಯಲ್ಲಿ ಡ್ರೈನೇಜ್ ಸ್ವಚ್ಛಗೊಳಿಸಲು ಜಲಮಂಡಳಿ ಸಿಬ್ಬಂದಿ ತೆರಳಿದ್ದರು. ಸುಮಾರು 20 ಅಡಿ ಆಳದ ಡ್ರೈನೇಜ್‍ನಲ್ಲಿ ಯಂತ್ರದ ಸಹಾಯದಿಂದ ಸ್ವಚ್ಛತೆ ಮಾಡಬಹುದು ಅಂತಾ ಸಿಬ್ಬಂದಿ ಜಲಮಂಡಳಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸದ್ಯ ಯಂತ್ರಗಳು ಇಲ್ಲ. ಹಾಗೆ ಕೆಲಸ ಮಾಡಿ ಅಂತಾ ಅಧಿಕಾರಿಗಳ ಒತ್ತಡಕ್ಕೆ ಹಾಕಿದ್ದಾರೆ. ಅಧಿಕಾರಿಗಳ ಒತ್ತಡಕ್ಕೆ ಒಳಚರಂಡಿಗೆ ಇಳಿದ ಲಾಲ್ ಅಹ್ಮದ್(25), ರಶೀದ್ (30) ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರ ರಕ್ಷಣೆಗೆ ತೆರಳಿದ ರಾಜು ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಘಟನೆ ಖಂಡಿಸಿ ಜಿಲ್ಲಾ ಆಸ್ಪತ್ರೆ ಎದುರು ರಸ್ತೆ ತಡೆ ಜಲ ಮಂಡಳಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಯಂತ್ರಗಳ ಮೂಲಕ ಮಾಡಬೇಕಿದ್ದ ಕೆಲಸವನ್ನು ಮನುಷ್ಯರ ಮೂಲಕ ಮಾಡಿಸಲಾಗಿದೆ. ತಕ್ಷಣ ಅಧಿಕಾರಿಗಳ ಎಚ್ಚೆತ್ತಿದ್ದರೂ ಈ ಘಟನೆ ನಡೆಯುತ್ತಿರಲಿಲ್ಲ. ಮೃತರ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ಕುರಿತು ಆರ್.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.