– ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಆರೋಗ್ಯದಲ್ಲಿ ಸುಧಾರಣೆಯಾಗಿದೆ
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಅವರ ಆರೋಗ್ಯ ಸುಧಾರಿಸುತ್ತಿದ್ದು, ಸ್ಥಿರವಾಗಿದ್ದಾರೆ ಎಂದು ಅವರ ಪುತ್ರ ಹಾಗೂ ಕಾಂಗ್ರೆಸ್ ನಾಯಕ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಭಿಜಿತ್ ಬ್ಯಾನರ್ಜಿ, ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ದೇವರ ಆಶೀರ್ವಾದದಿಂದಾಗಿ ನಿಮ್ಮೆಲ್ಲರ ಹಾರೈಕೆಯಿಂದ ಈ ಹಿಂದಿನ ದಿನಗಳಿಗಿಂತ ಇದೀ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಸ್ಥಿರವಾಗಿದ್ದಾರೆ. ಅಲ್ಲದೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶೀಘ್ರವೇ ಅವರು ಮತ್ತೆ ನಮ್ಮನ್ನು ಸೇರಲಿದ್ದಾರೆ ಎಂದು ನಾವು ಬಲವಾಗಿ ನಂಬಿದ್ದೇವೆ ಎಂದು ತಿಳಿಸಿದ್ದಾರೆ.
Advertisement
Yesterday , I had visited my Father In Hospital . With God’s grace & all your good wishes , He is much better & stable than D preceeding days! All his vital parameters are stable & he is responding to treatment ! We firmly believe that He will be back among us soon
Thank You????
— Abhijit Mukherjee (@ABHIJIT_LS) August 16, 2020
Advertisement
ಆಗಸ್ಟ್ 10ರಂದು ಪ್ರಣಬ್ ಮುಖರ್ಜಿ ಅವರು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಆ ಬಳಿಕ ಸೋಮವಾರ ರಾತ್ರಿಯಿಂದಲೇ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಿದರೂ ಯಾವುದೇ ರೀತಿ ಚೇತರಿಕೆ ಕಂಡು ಬಂದಿರಲಿಲ್ಲ. ಹೀಗಾಗಿ ಅವರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿತ್ತು. ನಂತರ ಚಿಕಿತ್ಸೆ ಮುಂದುವರಿಸಿದ್ದು, ವೆಂಟಿಲೇಟರ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಈ ಸಂಬಂಧ ಸ್ವತಃ ಮಾಜಿ ರಾಷ್ಟ್ರಪತಿಗಳೇ ಟ್ವೀಟ್ ಮಾಡಿ, ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೋವಿಡ್-19 ಪರೀಕ್ಷೆಗೆ ಒಳಗಾದೆ. ಇದೀಗ ವರದಿ ಪಾಸಿಟಿವ್ ಎಂದು ಬಂದಿದ್ದು, ಯಾರೂ ಆತಂಕ ಪಡಬೇಡಿ. ಹಾಗೆಯೇ ಕಳೆದ ಒಂದು ವಾರದಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಪರೀಕ್ಷೆಗೆ ಒಳಗಾಗಿ, ಹೋಂ ಐಸೋಲೇಟ್ ಆಗಿ ಎಂದು ಮನವಿ ಮಾಡಿಕೊಂಡಿದ್ದರು.