ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಆದರೆ ರಣ ಗಾಳಿ ಒಂದೇ ಸಮನೇ ಬೀಸುತ್ತಿದ್ದು ಜಿಲ್ಲೆಯ ಅಲ್ಲಲ್ಲೇ ಗುಡ್ಡ, ಮನೆಯ ಗೋಡೆ ಕುಸಿತವಾಗಿದೆ. ವಿದ್ಯುತ್ ಕಂಬಗಳು ಹಾಗೂ ಮರಗಳು ಮುರಿದು ಬೀಳುವುದು ಕಡಿಮೆಯಾಗಿಲ್ಲ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದೆ. ಆದರೆ, ಜನವಸತಿ ಪ್ರದೇಶದಲ್ಲಿ ಮಳೆ ಪ್ರಮಾಣ ಕೊಂಚ ಇಳಿಕೆಯಾಗಿದೆ. ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ಗುಡ್ಡವೊಂದು ಕುಸಿದು ಬಿದ್ದಿದೆ.
Advertisement
Advertisement
ಗಡ್ಡ ಕುಸಿದು ಬೃಹತ್ ಪ್ರಮಾಣದ ಮಣ್ಣು ರಸ್ತೆಗೆ ಬಿದ್ದ ಕಾರಣ ಮೂಡಿಗೆರೆ-ಕಳಸ ಮಾರ್ಗದ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಜೆಸಿಬಿ ಹಾಗೂ ಟ್ರ್ಯಾಕ್ಟರ್ ಮೂಲಕ ಮಣ್ಣನ್ನು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ದ.ಕ ಜಿಲ್ಲೆಯ ಕೆಲ ದೇವಸ್ಥಾನಗಳಿಗೆ ನೋಟೀಸ್
Advertisement
ಗುಡ್ಡದ ಮೇಲಿಂದ ಹರಿದ ಬಂದ ನೀರಿಗೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಕೂಡ ಇದೇ ಜಾಗದಲ್ಲಿ ಮಣ್ಣು ಕುಸಿದಿತ್ತು. ಆಗಲೂ ಅಧಿಕಾರಿಗಳು ಮಣ್ಣನ್ನ ತೆರವು ಮಾಡಿದ್ದರು. ಈಗ ಮತ್ತೆ ಅದೇ ಜಾಗದಲ್ಲಿ ಮಣ್ಣು ಕುಸಿದು ಬಿದ್ದಿದೆ. ಆದ್ದರಿಂದ ಅಧಿಕಾರಿಗಳು ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
ಕಳಸ, ಎನ್.ಆರ್.ಪುರ ಭಾಗದಲ್ಲೂ ಅಲ್ಲಲ್ಲೇ ಮಳೆ-ಗಾಳಿಗೆ ಮರ, ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿನ ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು, ಮರಗಳು ಮುರಿದು ಬಿದ್ದಿರುವುದರಿಂದ ಮಲೆನಾಡಿನ ಹಲವು ಗ್ರಾಮಗಳಲ್ಲಿ ಸಮಸ್ಯೆ ಎದುರಾಗಿದೆ.