ತಮಿಳಿನ ಹಾಸ್ಯ ನಟ ಪಾಂಡು ಕೊರೊನಾಗೆ ಬಲಿ

Public TV
1 Min Read
pandu

ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಪಾಂಡು ಕೊರೊನಾದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

pandu 2

ಪಾಂಡು ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಪಾಂಡು ಮತ್ತು ಪತ್ನಿ ಕುಮುದಾ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಬಳಿಕ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ ಎಂದು ವರದಿಯಾಗಿದೆ.

ಪಾಂಡು ಅವರು ತಮಿಳಿನಲ್ಲಿ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದರು. ಆದರೆ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಇವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. ಪತ್ನಿ ಕುಮುದಾ ಅವರು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

viveke 1

ಕಳೆದ ಕೆಲ ದಿನಗಳ ಹಿಂದೆ ತಮಿಳಿನ ಖ್ಯಾತ ಹಾಸ್ಯ ನಟ ವಿವೇಕ್ ಕೊರೊನಾಗೆ ಬಲಿಯಾಗಿದ್ದರು. ಆ ಬಳಿಕ ಇದೀಗ ಪಾಂಡು  ಮೃತಪಟ್ಟಿದ್ದಾರೆ. ಇದರಿಂದ ತಮಿಳು ಚಿತ್ರರಂಗಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿದ್ದಾರೆ.

Share This Article