ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಮುಖ್ಯಂಮತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಹೌದು. ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಬರೋಬ್ಬರಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಇತ್ತೀಚೆಗೆ ಶಶಿಕಲಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಶಶಿಕಲಾ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದಾರೆ.
Advertisement
Here is #Sasikala 's statement about quitting Politics.. https://t.co/Io887t17LC pic.twitter.com/vlvva9j6Ha
— Ramesh Bala (@rameshlaus) March 3, 2021
Advertisement
ನಾನು ಯಾವತ್ತೂ ಯಾವುದೇ ಹುದ್ದೆಗೆ ಆಸಿಸಲಿಲ್ಲ. ತಮಿಳುನಾಡಿಬ ಜನರಿಗೆ ನಾನು ಕೃತಜ್ಞಳಾಗಿದ್ದೇನೆ. ರಾಜಕೀಯದಿಂದ ದೂರ ಸರಿಯುತ್ತೇನೆ. ಅಲ್ಲದೆ ಅಮ್ಮನ ಸರ್ಕಾರವನ್ನು ತಮಿಳುನಾಡಿನಲ್ಲಿ ಸ್ಥಾಪಿಸಬೇಕೆಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದರು.
Advertisement
ಚಿನ್ನಮ್ಮ ಜೈಲುವಾಸ ಅನುಭವಿಸಿದ್ದು ಏಕೆ..?
1996ರಲ್ಲಿ ಸುಬ್ರಮಣಿಯನ್ ಸ್ವಾಮಿ, ಜಯಲಲಿತಾ ಸೇರಿದಂತೆ ಆಪ್ತರಾದ ಶಶಿಕಲಾ, ಇಳವರಸಿ ಹಾಗೂ ಸುಧಾಕರ್ ಮೇಲೆ ಆಕ್ರಮ ಆಸ್ತಿ ಗಳಿಕೆ ಕೇಸ್ ಹಾಕಿದ್ದರು. ಇದಕ್ಕಾಗಿ ಬೆಂಗಳೂರಿನಲ್ಲಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿತ್ತು. 1991 ರಿಂದ 96 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ 66 ಕೋಟಿಯಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಅನ್ನೋದು ಸಾಬೀತಾಗಿ, ನಾಲ್ವರಿಗೂ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ವಿಶೇಷ ಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟಿನಲ್ಲಿ ಜಯಲಲಿತಾ ಪ್ರಶ್ನೆ ಮಾಡಿದ್ದರು.
Advertisement
ಕರ್ನಾಟಕ ಹೈ ಕೋರ್ಟಿನಲ್ಲಿ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ನಾಲ್ವರನ್ನ ನಿರ್ದೋಷಿಗಳು ಎಂದು ಕರ್ನಾಟಕ ಹೈ ಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು. ಹೈ ಕೋರ್ಟ್ ತೀರ್ಪನ್ನು ರದ್ದುಗೊಳಿಸಿ, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಲಾಗಿತ್ತು. 2016ರಲ್ಲಿ ಜಯಲಲಿತಾ ಮರಣ ಹೊಂದಿದ್ರಿಂದ ಉಳಿದ ಮೂವರು ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯ್ತು. ಇದೀಗ ಶಶಿಕಲಾ ಮತ್ತು ಇಳವರಿಸಿ 10 ಕೋಟಿ ದಂಡ ಪಾವತಿಸಿದ್ದರು.
ಜನವರಿ 27ರಂದು ಜೈಲಿನಿಂದ ಶಶಿಕಲಾ ಬಿಡುಗಡೆಯಾಗಿದ್ದ ಶಶಿಕಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಜನವರಿ 31ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಶಶಿಕಲಾ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. 2021ರ ಫೆ.8ರಂದು ಶಶಿಕಲಾ ಅವರು ತವರಿಗೆ ತೆರಳಿದ್ದರು.