ಮಡಿಕೇರಿ: ಕನ್ನಡ ನಾಡಿನ ಜೀವನದಿ, ಕಾವೇರಿ ಉಗಮಸ್ಥಾನವಾದ ತಲಕಾವೇರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಗಮಿಸಿದ್ದು, ತಲಕಾವೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ರಾಷ್ಟ್ರಪತಿಯವರು ಅಗಮಿಸಿದ ವೇಳೆಯಲ್ಲಿ ತಲಕಾವೇರಿಯ ಅರ್ಚಕರು ಪೂರ್ಣಕುಂಭದೊಂದಿಗೆ ಅವರನ್ನು ಸ್ವಾಗತಿಸಿದರು. ಬಳಿಕ ಕಾವೇರಿ ಕುಂಡಿಕೆ ಬಳಿ ಕಾವೇರಿ ಮಾತೆಗೆ ಇಷ್ಟವಾದ ಕುಂಕುಮ ಅರ್ಚನೆ ಹಾಗೂ ವಿಶೇಷ ಪೂಜೆಯನ್ನು ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.
ರಾಷ್ಟ್ರಪತಿ ಅವರ ಧರ್ಮಪತ್ನಿ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.