– ತನಿಖೆ ವೇಳೆ ಮಹಿಳೆಯ ರಹಸ್ಯ ಬಯಲು
ಲಕ್ನೋ: 23 ವರ್ಷದ ಯುವಕನೊಬ್ಬ ಮತ್ತು ಬರುವ ಔಷಧಿ ನೀಡಿ ಮನೆ ಮಾಲೀಕನ ಪತ್ನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಜಹಾಂಗೀರ್‌ಪುರ ಪ್ರದೇಶದಲ್ಲಿ ನಡೆದಿದೆ.
ಆರೋಪಿಯನ್ನು ವಿಶಾಲ್ ಎಂದು ಗುರುತಿಸಲಾಗಿದೆ. ಆರೋಪಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದನು. ಮತ್ತು ಬರುವ ಔಷಧಿ ನೀಡಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ.
ಈ ಘಟನೆ ನಡೆದಾಗ ಮಹಿಳೆಯ ಪತಿ ಮನೆಯಲ್ಲಿ ಇರಲಿಲ್ಲ. ಪತಿ ಕೆಲಸದ ನಿಮಿತ್ತ ರಾಜಸ್ಥಾನಕ್ಕೆ ಹೋಗಿದ್ದರು. ಆದರೆ ಏಪ್ರಿಲ್‍ನಿಂದ ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿದ್ದರಿಂದ ಮಹಿಳೆಯ ಪತಿ ಅಲ್ಲಿಯೇ ಇದ್ದರು. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಮಹಿಳೆ ಈಗ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ.
“ಆರೋಪಿ ವಿಶಾಲ್ ಬಾಡಿಗೆ ನೀಡುವ ನೆಪದಲ್ಲಿ ನಮ್ಮ ಮನೆಗೆ ಬಂದಿದ್ದ. ನಂತರ ಇಬ್ಬರು ಚಹಾವನ್ನು ಕುಡಿದೆವು. ಚಹಾ ಕುಡಿದ ನಂತರ ನನಗೆ ತಲೆ ಸುತ್ತು ಬಂತು. ಈ ವೇಳೆ ವಿಶಾಲ್ ನನ್ನ ಬಟ್ಟೆಗಳನ್ನು ಬಿಚ್ಚಿದ್ದನು. ನಂತರ ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ನಾನು ವಿರೋಧಿಸಿದಾಗ ಆರೋಪಿ ನನ್ನನ್ನು ಥಳಿಸಿ ನನ್ನ ಮತ್ತು ನನ್ನ ಇಬ್ಬರು ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದನು. ಚಹಾದಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ್ದನು” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಮಹಿಳೆ ಜೇವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಐಪಿಸಿ ಸೆಕ್ಷನ್ ಕಾಯ್ದೆಯಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ತನಿಖೆ ವೇಳೆ ಮಹಿಳೆಯ ಅನೈತಿಕ ಸಂಬಂಧ ಬಯಲಾಗಿದೆ.
ಮಹಿಳೆ ಆರೋಪಿ ವಿಶಾಲ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇವರಿಬ್ಬರ ಸಂಬಂಧದ ಬಗ್ಗೆ ತಿಳಿದು ಪತಿ ಕೆಲವು ದಿನಗಳ ಹಿಂದೆ ಅವಳಿಂದ ದೂರವಾಗಿ ವಾಸಿಸುತ್ತಿದ್ದನು. ಆರೋಪಿಯನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಬ್ ಇನ್ಸ್‌ಪೆಕ್ಟರ್ ಫಿರೋಜ್ ಖಾನ್ ಹೇಳಿದ್ದಾರೆ.