ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಬ್ಯಾಂಕ್ ಕಾಲೋನಿಯ ನಿವಾಸದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು 21 ವರ್ಷದ ರಚಿತಾ ಎಂದು ಗುರುತಿಸಲಾಗಿದ್ದು, ಕಳೆದ ಎರಡೂವರೆ ವರ್ಷದ ಹಿಂದೆ ವೀರಣ್ಣ ಎಂಬವರ ಜೊತೆ ಮದುವೆಯಾಗಿತ್ತು. ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ವೀರಣ್ಣ, ಮದುವೆಯಾದ ಬಳಿಕ ಹಣಕ್ಕಾಗಿ ಪತ್ನಿಯನ್ನು ಪೀಡಿಸಿ ತೊಂದರೆ ಕೊಡ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ನಿನ್ನೆಯು ಕೂಡ ತವರು ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಗಲಾಟೆ ತೆಗೆದಿದ್ದಾನೆ. ಇದರಿಂದ ನೊಂದ ರಚಿತಾ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಯ ನಂತರ ರಚಿತಾ ಪತಿ ವೀರಣ್ಣ, ಮಾವ ಚಂದ್ರಕಾಂತ್, ಅತ್ತೆ ಲಕ್ಷ್ಮಿಬಾಯಿ, ಮೈದುನ್ ಪವನ್ ಬಂಧನ ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.