ಮುಂಬೈ: 24 ವರ್ಷದ ಯುವಕರೊಬ್ಬರು ತಾವೇ ನಿರ್ಮಿಸಿದ ಹೆಲಿಕಾಪ್ಟರ್ ಟ್ರಯಲ್ ರನ್ ನೋಡುವ ವೇಳೆ ಅದರ ಬ್ಲೇಡ್ ಗಂಟಲಿಗೆ ತಗುಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
Advertisement
ಮಹಾರಾಷ್ಟ್ರದ ಮಹಾಗಾಂವ್ ತಾಲೂಕಿನ ಪುಲ್ಸವಾಂಗಿ ಗ್ರಾಮದ ಶೇಖ್ ಇಸ್ಮಾಯಿಲ್ ಶೇಖ್ ಇಬ್ರಾಹಿಂ 8ನೇ ತರಗತಿಯಲ್ಲಿದ್ದಾಗಲೇ ಶಾಲೆ ತೊರೆದು ಮೆಕ್ಯಾನಿಕ್ ಆಗಿ ಸ್ಟಿಲ್ ಪೈಪ್‍ಗಳನ್ನು ಬೆಸೆಯುವ ಕೆಲಸ ಮಾಡುತ್ತಿದ್ದರು. ಅವರೇ ಸಿಂಗಲ್ ಸೀಟ್ ಇರುವ ಹೆಲಿಕಾಪ್ಟರ್ ಮೂಲ ಮಾದರಿಯೊಂದನ್ನು ನಿರ್ಮಿಸಿದ್ದರು. ಆದರೆ ಹೆಲಿಕಾಪ್ಟರ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಪರೀಕ್ಷಿಸುತ್ತಿದ್ದ ವೇಳೆ ಬ್ಲೇಡ್ ತಗುಲಿ ಅವರ ಗಂಟಲು ಕಟ್ ಆಗಿದೆ. ಈ ಘಟನೆ ಆಗಸ್ಟ್ 10 ರಂದು ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯಲ್ಲಿ ನಡೆದಿದ್ದು, ಗಾಯಗೊಂಡ ಶೇಖ್ ಇಸ್ಮಾಯಿಲ್ ಶೇಖ್ ಇಬ್ರಾಹಿಂಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಇಸ್ಮಾಯಿಲ್ ಶೇಖ್ ಮೃತಪಟ್ಟಿದ್ದಾರೆ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗುತ್ತಿದೆ.
Advertisement
Advertisement
ಈ ಕುರಿತಂತೆ ಪೊಲೀಸರು, ಮೃತ ವ್ಯಕ್ತಿ 2 ವರ್ಷಗಳ ಹಿಂದೆ ಈ ಹೆಲಿಕಾಪ್ಟರ್‌ನನ್ನು ನಿರ್ಮಿಸಿದ್ದರು. ಅಲ್ಲದೇ ಹೆಲಿಕಾಪ್ಟರ್ ಚಾಪರ್ ಸಿದ್ಧಪಡಿಸಲು ವೆಲ್ಡಿಂಗ್ ಸ್ಟೀಲ್ ಪೈಪ್ ಮತ್ತು ಮಾರುತಿ 800 ಎಂಜಿನ್ ಬಳಸಿದ್ದರು. ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಸಾರ್ವಜನಿಕವಾಗಿ ಹೆಲಿಕಾಪ್ಟರ್‍ನನ್ನು ಅನಾವರಣಗೊಳಿಸುವ ಯೋಜನೆ ಹೊಂದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಸರ್ಕಾರ ಸಾರ್ವಜನಿಕ ಗಣೇಶೋತ್ಸವದ ನಿಷೇಧವನ್ನು ಹಿಂಪಡೆಯಬೇಕು: ಶ್ರೀರಾಮಸೇನೆ
Advertisement
ಈ ಬಗ್ಗೆ ಇಸ್ಮಾಯಿಲ್ ಅವರ ಸಹೋದರ ಮತ್ತು ಮೂವರು ಸ್ನೇಹಿತರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಸದ್ಯ ಹೆಲಿಕಾಪ್ಟರ್‌ನನ್ನು ಪೊಲೀಸರು ವಶಪಡೆದುಕೊಂಡಿದ್ದಾರೆ. ಇದನ್ನೂ ಓದಿ:BJP ಜೊತೆಗೆ ಟ್ವಿಟ್ಟರ್ ಕೈಜೋಡಿಸಿ ಪ್ರಜಾತಂತ್ರ ಹತ್ತಿಕ್ಕುವ ಕೃತ್ಯದಲ್ಲಿ ತೊಡಗಿದೆ: ಪ್ರಿಯಾಂಕಾ ಗಾಂಧಿ