ತಾಯಿಯ ಶವದೊಂದಿಗೆ 5 ದಿನ ಮನೆಯಲ್ಲೇ ಕಳೆದ ಮಗಳು

Public TV
1 Min Read
smg final

ಶಿವಮೊಗ್ಗ: ತಾಯಿ ಮೃತಪಟ್ಟು ಐದು ದಿನವಾದರೂ ಮಗಳು ಶವದೊಂದಿಗೆ ಐದು ದಿನಗಳ ಕಾಲ ಕಳೆದಿರುವ ಘಟನೆ ಶಿವಮೊಗ್ಗದ ಬಸವನಗುಡಿಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಬಸವನಗುಡಿ ನಿವಾಸಿ ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಮೃತ ರಾಜೇಶ್ವರಿ ಪತಿ ಸಹ ಕಳೆದ 20 ವರ್ಷದ ಹಿಂದೆಯೇ ಮೃತಪಟ್ಟಿದ್ದರು. ಹೀಗಾಗಿ ಮನೆಯಲ್ಲಿ ತಾಯಿ ಮಗಳು ಇಬ್ಬರೇ ವಾಸಿಸುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ಮೃತ ರಾಜೇಶ್ವರಿ ಸ್ತನ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು.

vlcsnap 2020 05 19 10h03m57s160

ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಮೃತ ರಾಜೇಶ್ವರಿ ಕಳೆದ ಐದು ದಿನದ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಔಷಧಿ, ಮಾತ್ರೆ ಸೇವಿಸಿರುವ ಕಾರಣ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ತಾಯಿ ಮೃತಪಟ್ಟು ಐದು ದಿನವಾದರೂ ಆಕೆಯ ಮಗಳು ಶಾಂಭವಿಗೆ ಇದರ ಪರಿವೇ ಇರಲಿಲ್ಲ. ವಾಸನೆಯ ಜೊತೆ ಮನೆಯೊಳಗೆ ಇದ್ದಳು.

ಶವ ಕೊಳೆತು ವಾಸನೆ ಬರುತ್ತಿದ್ದರಿಂದ ಅಕ್ಕಪಕ್ಕದ ನಿವಾಸಿಗಳು ಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

SMG 1 2

ಮೃತ ರಾಜೇಶ್ವರಿ ಅವರ ಮಗಳು ಶಾಂಭವಿ ಮಾನಸಿಕ ಅಸ್ವಸ್ಥೆ ಎನ್ನಲಾಗಿದ್ದು, ಇದೀಗ ಆಕೆಯನ್ನು ಪೊಲೀಸರು ಸುರಭಿ ಸಾಂತ್ವಾನ ಕೇಂದ್ರದಲ್ಲಿ ಇರಿಸಿದ್ದಾರೆ. ಈ ಘಟನೆ ಕುರಿತು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *