ಮಡಿಕೇರಿ: ಒಂದೇ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ತಾಯಿ, ಮಗ ಇಬ್ಬರು ಪಾಸ್ ಆಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕೈಕೇರಿ ನಿವಾಸಿಯಾಗಿರುವ ಸಮಾಜ ಸೇವಕಿ ಪಡಿಕಲ್ ಕುಸುಮಾವತಿ ಚಂದ್ರಶೇಖರ್ ಹಾಗೂ ಪುತ್ರ ಗೌತಮ್ ಇಬ್ಬರು ಒಟ್ಟಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು.
Advertisement
Advertisement
ಗೌತಮ್ ಗೋಣಿಕೊಪ್ಪಲು ಪ್ರೌಢಶಾಲೆಯಲ್ಲಿ ಈ ಹಿಂದೆ ಪರೀಕ್ಷೆ ಬರೆದು ಗಣಿತದಲ್ಲಿ ಅನುತ್ತೀರ್ಣರಾಗಿದ್ದರು. ಆದರೆ ಈ ಬಾರಿ ತನ್ನ ತಾಯಿಯೊಂದಿಗೆ ಪರೀಕ್ಷೆ ಕೂರುವ ಅವಕಾಶ ಸಿಕ್ಕಿತು. ಮಡಿಕೇರಿಯಲ್ಲಿ ಕುಸುಮಾರವರು 6 ವಿಷಯಗಳ ಪರೀಕ್ಷೆಗೆ ಹಾಜರಾಗಿದ್ದರೆ, ಪುತ್ರ ಗೌತಮ್ ಗೋಣಿಕೊಪ್ಪಲು ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದು ವಿಶೇಷ.
Advertisement
Advertisement
ಕುಸುಮಾವತಿ 18 ವರ್ಷಗಳ ಹಿಂದೆ ಟಿ.ಶೆಟ್ಟಿಗೇರಿ ಮಾಯಣಮಾಡ ಮಂದಣ್ಣ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರಬೇಕಾದರೆ ವಿವಾಹವಾದ್ದರಿಂದ ವಿದ್ಯಾಭ್ಯಾಸಕ್ಕೆ ಕಡಿವಾಣ ಬಿತ್ತು. ಇದೀಗ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. ವಿಶೇಷವೆಂದರೆ ತಾಯಿ, ಮಗ ಇಬ್ಬರೂ ಒಂದೇ ಸಮಯದಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗಿರುವುದು ಕೊಡಗು ಜಿಲ್ಲೆಯ ಮಟ್ಟಿಗೆ ವಿಭಿನ್ನ ಸಾಧನೆಯಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ:ಮಕ್ಕಳ ಮೊದಲ ಲಸಿಕೆಗೆ ಕೇಂದ್ರ ಗ್ರೀನ್ ಸಿಗ್ನಲ್?