ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ತನ್ನ ವೃತ್ತಿ ಬದ್ಧತೆ ಮೆರೆದ ಶಿಕ್ಷಕಿಗೆ ಜಿಲ್ಲೆಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸ್‍ಎಸ್‍ಎಲ್‍ಸಿ ಪರಿಕ್ಷೆಯ ಮೌಲ್ಯ ಮಾಪನಕ್ಕೆ ಶಿಕ್ಷಕಿ ಹಾಜರಾಗಿದ್ದಾರೆ. ಈ ಮೂಲಕ ಶಿಕ್ಷಕಿ ತನ್ನ ವೃತ್ತಿ ಬದ್ಧತೆ ತೋರಿರುವ ಅಪರೂಪದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಬೆಟ್ಟಗೇರಿ ನಿವಾಸಿ ಶಿಕ್ಷಕಿ ಕವಿತ ಎಂಬವರು ತನ್ನ ತಾಯಿಯನ್ನು ಕಳೆದುಕೊಂಡಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷೆಯ ಮೌಲ್ಯ ಮಾಪನಕ್ಕೆ ಹಾಜರಾಗಿದ್ದಾರೆ. ಬೆಳಗ್ಗೆ ಕವಿತ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಆದರೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಪರಿಕ್ಷಾ ಮೌಲ್ಯಕ್ಕೆ ಆಗಮಿಸಿದ್ದಾರೆ.
ಸದ್ಯ ಶಿಕ್ಷಕಿಯ ವೃತ್ತಿ ಬದ್ಧತೆಗೆ ಸಹೋದ್ಯೋಗಿಗಳು ಮಾತ್ರವಲ್ಲದೆ ಇಡೀ ಜಿಲ್ಲೆಯ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.