ಬಳ್ಳಾರಿ: ಮಲೆನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ನಾಳೆ ಸಂಜೆಯಿಂದ ತುಂಗಭದ್ರಾ ಡ್ಯಾಂನಿಂದ ನೀರು ಹೊರಕ್ಕೆ ಬಿಡುವ ಮುನ್ಸೂಚನೆ ನೀಡಲಾಗಿದೆ.
ತುಂಗಭ್ರದ್ರಾ ಡ್ಯಾಂ ಬೋರ್ಡ್ ನಿಂದ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ನದಿ ಪಾತ್ರದ ಹಳ್ಳಿ ಜನ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಮಲೆನಾಡು ಭಾಗಲ್ಲಿ ಸತತ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ. ಸದ್ಯ 1,20,411 ಕ್ಯೂಸೆಕ್ಸ್ ಒಳಹರಿವಿದ್ದು, ನಾಳೆ ನೀರಿನ ಒಳಹರಿವು ಎರಡು ಲಕ್ಷ ಕ್ಯೂಸೆಕ್ಸ್ ದಾಟುವ ಸಧ್ಯತೆ ಇದೆ.
Advertisement
Advertisement
ಒಟ್ಟು 100 ಟಿಎಂಸಿ ಸಂಗ್ರಹ ಸಾಮಥ್ರ್ಯದ ಜಲಾಶಯದಲ್ಲಿ ಸದ್ಯ 73.357 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ನಾಳೆ ಟಿಬಿ ಡ್ಯಾಂ ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡುವ ಸಾದ್ಯತೆ ಇದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಹಾಯಕ ಆಯ್ತರು ಸೇತಿದಂತೆ ಸ್ಥಳಿಯ ಆಡಳಿತಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
Advertisement
ಮುನಿರಾಬಾದ್ ಜಲಾಶಯ ಭರ್ತಿಗೆ ಕೆಲವೇ ಟಿಎಂಸಿ ಬಾಕಿ
ಮಲೆನಾಡು ಭಾಗದಲ್ಲಿ ಅಧಿಕ ಮಳೆ ಬಿಳುತ್ತಿದ್ದು, ತುಂಗಾ ಹಾಗೂ ವರದಾ ಜಲಾಶಯಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ತುಂಗಭದ್ರಾ ಜಲಾಶಯ ಭರ್ತಿಗೆ ದಿನಗಡನೆ ಆರಂಭವಾಗಿದೆ. ಕೊಪ್ಪಳದ ಮುನಿರಾಬಾದ ಬಳಿಯ ತುಂಗಭದ್ರಾ ಜಲಾಶಯದಲ್ಲಿ ಸದ್ಯ 75 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಗೆ ಕೆಲ ಟಿಎಂಸಿಗಳು ಮಾತ್ರ ಬಾಕಿ ಉಳಿದುಕೊಂಡಿದೆ.
Advertisement
ಇಂದು ತುಂಗಭದ್ರಾ ಜಲಾಶಯಕ್ಕೆ 75,000 ಕ್ಯೂಸೆಕ್ಸ್ ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಇದೇ ರೀತಿ ಒಳ ಹರಿವು ಇದ್ದರೆ ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಶಿವಮೊಗ್ಗದ ತುಂಗಾ ಜಲಾಶಯದಿಂದ 75 ಸಾವಿರ ಕ್ಯೂಸೆಕ್ಸ್ ನೀರು ನದಿಗೆ ಬಿಡಲಾಗಿದೆ. ಅಲ್ಲದೆ ಹಾವೇರಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿ ತುಂಗಭದ್ರಾ ನದಿಯ ಉಪನದಿ ವರದಾ ಭರ್ತಿಯಾಗಿ ಹರಿಯುತ್ತಿದೆ. ಇದರ ಪರಿಣಾಮ ತುಂಗಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ಒಳಹರಿವು ಹೆಚ್ಚಾಗಿದೆ.
ತುಂಗಭದ್ರಾ ಜಲಾಶಯಕ್ಕೆ 75,000ಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದು ಈ ವರ್ಷದ ಗರಿಷ್ಠ ಪ್ರಮಾಣದ ಒಳಹರಿವು ಆಗಿದೆ. ಕಳೆದ ವರ್ಷ ಇದೇ ಹೊತ್ತಿಗೆ ಕೇವಲ 13,196 ಕ್ಯೂಸೆಕ್ಸ್ ನೀರು ಬರುತ್ತಿತ್ತು. ಕಳೆದ ವರ್ಷ ಈ ಹೊತ್ತಿಗೆ ಜಲಾಶಯದಲ್ಲಿ 36.66 ಟಿಎಂಸಿ ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ಈಗಾಗಲೆ 75 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೀರಿನ ಸಂಗ್ರಹ ಹೆಚ್ಚಾಗಿದೆ. ಇನ್ನೂ ಒಳಹರಿವು ಹೆಚ್ಚಾದರೆ ಎರಡ್ಮೂರು ದಿನದಲ್ಲಿ ಜಲಾಶಯ ಭರ್ತಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರಾ ಜಲಾಶಯದ ಮಾಹಿತಿ ಪ್ರಕಾರ ಸದ್ಯ 2.11 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ಸದ್ಯ ಜಲಾಶಯದಲ್ಲಿ 1624.62 ಅಡಿ ನೀರಿದ್ದು, 75 ಟಿಎಂಸಿ ನೀರು ಸಂಗ್ರಹವಾಗಿದೆ. 5,214 ಕ್ಯೂಸೆಕ್ಸ್ ನೀರನ್ನು ಕಾಲುವೆಗಳಿಗೆ ಹೊರ ಬಿಡಲಾಗುತ್ತಿದೆ. ಎಡದಂಡೆ ಕೆಳಮಟ್ಟದ ಕಾಲುವೆಗೆ 3246 ಕ್ಯೂಸೆಕ್ಸ್, ಬಲದಂಡೆ ಮೇಲ್ಮಟ್ಟದ ಕಾಲುವೆಗೆ 2479 ಕ್ಯೂಸೆಕ್ಸ್, ಬಲದಂಡೆ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ಸ್ ಹಾಗೂ ರಾಯ ಬಸವ ಕಾಲುವೆಗೆ 252 ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಜಲಾಶಯಕ್ಕೆ 75 ಸಾವಿರಕ್ಕೂ ಹೆಚ್ಚು ನೀರು ಒಳಹರಿವು ಬಂದರೆ ಬೇಗನೇ ಜಲಾಶಯ ಭರ್ತಿಯಾಗಲಿದೆ.
ಈಗಾಗಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಲಾನಯನ ಪ್ರದೇಶದ ವಿವಿಧ ಗ್ರಾಮಗಳಿಗೆ ಮುನ್ನೆಚ್ಚರಿಕೆ ನೀಡಬೇಕಿದೆ. 2019ರಲ್ಲಿ ಅವಧಿಗೂ ಪೂರ್ವ ಜಲಾಶಯ ಭರ್ತಿಯಾಗಿ ನದಿಗೆ ನೀರು ಬಿಟ್ಟಿದ್ದರಿಂದ ಕೆಲವು ಕಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಒಳಹರಿವು ಗಮನಿಸಿದರೆ ಈ ಬಾರಿಯೂ ಪ್ರವಾಹ ಸ್ಥಿತಿ ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಳೆದ ಎರಡು ದಿನದಿಂದ ತಗ್ಗಿದ್ದು, ಸ್ವಲ್ಪ ಬಿಡುವು ನೀಡಿದೆ. ಜಿಟಿ ಜಿಟಿ ಮಳೆಯಿಂದ ಮೂರು ಜಿಲ್ಲೆ ಜನತೆಗೆ ಮುಕ್ತಿ ಸಿಕ್ಕಿದೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಮಳೆಯೂ ಹೆಚ್ಚಾಗಿ ಸುರಿದಿದ್ದು, ಅತ್ತ ನಾರಾಯಣಪುರ ಜಲಾಶಯದಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಹೊರ ಬರುತ್ತಿರುವ ಕಾರಣ ಪ್ರವಾಹ ಸ್ಥಿತಿ ಉಂಟಾಗಿದೆ.