ತೋಳ ದಾಳಿಗೆ 15 ಕುರಿಗಳು ಬಲಿ- ಕುಟುಂಬಸ್ಥರ ಆಕ್ರಂದನ

Public TV
1 Min Read
gdg goat2 1 e1597584583224

ಗದಗ: ತೋಳ ದಾಳಿ ನಡೆಸಿದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಚೇನಹಳ್ಳಿಯಲ್ಲಿ ನಡೆದಿದೆ.

ಬಸವರಾಜ್ ಪೂಜಾರ ಅವರಿಗೆ ಸೇರಿದ 15ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಜಮೀನಿನಲ್ಲಿರುವ ಕುರಿ ದಡ್ಡಿ ಮೇಲೆ ತೋಳಗಳ ಹಿಂಡು ದಾಳಿಮಾಡಿವೆ ಎನ್ನಲಾಗುತ್ತಿದೆ. ದಡ್ಡಿಯಲ್ಲಿ ಯಾರೂ ಇಲ್ಲದ ವೇಳೆ ಏಕಾಏಕಿ ತೋಳಗಳು ದಾಳಿ ನಡೆಸಿದ್ದು, 15 ಕುರಿ ಹಾಗೂ ಮರಿಗಳು ಸಾವನ್ನಪ್ಪಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.

ಆರ್ಥಿಕ ನಷ್ಟ ಅನುಭವಿಸಿದ ಕುರಿ ಮಾಲಿಕ ಬಸವರಾಜ್ ಅವರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕುರಿಗಳನ್ನು ಕಳೆದುಕೊಂಡ ಮಾಲೀಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಶಿರಹಟ್ಟಿ ತಾಲೂಕು ಅರಣ್ಯ ಇಲಾಖೆಯ ಅಧಿಕಾರಿಗಳು, ಪಶುವೈದ್ಯಾಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *