ಹಾಸನ: ಕ್ಷುಲ್ಲಕ ಕಾರಣಕ್ಕೆ ಮನನೊಂದ ದಂಪತಿ ಒಟ್ಟಿಗೆ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಥಿ ಆಲೂರು ತಾಲೂಕಿನ ಬಲ್ಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟರಾಜು (58) ಕಾಂತಮ್ಮ (53) ಆತ್ಮಹತ್ಯೆಗೆ ಶರಣಾದ ದಂಪತಿ. ಮದುವೆ ವಿಚಾರದಲ್ಲಿ ಮಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ದಂಪತಿ ಮನನೊಂದಿದ್ದರು ಎಂದು ಹೇಳಲಾಗ್ತಿದೆ. ಇದೇ ವಿಷ್ಯವಾಗಿ ದಂಪತಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಘಟನೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.