ಮಂಗಳೂರು: ಜಿಲ್ಲೆಯ ಮೂಡಬಿದ್ರೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಕೋವಿಡ್-19 ಪರೀಕ್ಷೆಯ ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಸಂಖ್ಯೆ 6ಕ್ಕೇರಿಕೆಯಾಗಿದೆ.
ಮೇ 20ರಂದು ಮುಂಬೈನಿಂದ ಆಗಮಿಸಿದ್ದ 58 ವರ್ಷದ ವ್ಯಕ್ತಿಯನ್ನು ಮೂಡಬಿದ್ರೆಯ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಕೊರೊನಾ ಭಯ ಮತ್ತು ಭವಿಷ್ಯದ ಚಿಂತೆಯಿಂದಾಗಿ ವ್ಯಕ್ತಿ ಕ್ವಾರಂಟೈನ್ ಕೇಂದ್ರದಲ್ಲಿ ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಇಂದು ಜಿಲ್ಲೆಯ 29 ವರ್ಷದ ಮಹಿಳೆ(ರೋಗಿ 1694)ಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಮಹಿಳೆ ಮಹಾರಾಷ್ಟ್ರದಿಂದ ಹಿಂದಿರುಗಿದ್ದರು. ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.